ಮುಂಬೈ: ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದಲ್ಲಿ ಪುಣೆ ಪೊಲೀಸರು ಶನಿವಾರ (ಸೆ.5) ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಮುಖ್ಯ ಆರೋಪಿ ಚೇತನ್ ಚೌಧರಿಯ ಸ್ನೇಹಿತ ರಿತೇಶ್ ಹಂಗೆಯನ್ನು ಪೊಲೀಸರು ಬಂಧಿಸಿದ್ದು, ರಿತೇಶ್ ಕೂಡ ಈ ಕೊಲೆಯಲ್ಲಿ ಭಾಗಿಯಾಗಿದ್ದ ಹಾಗೂ ಕೊಲೆ ಸಂಚು ಹೂಡಿರುವ ಬಗ್ಗೆ ಆತನಿಗೆ ಮಾಹಿತಿ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಬಂಧಿತ ರಿತೇಶ್‌ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕೊಲೆಯಲ್ಲಿ ಆತನ ಪಾತ್ರ ಹಾಗೂ ಇನ್ನೂ ಯಾರೆಲ್ಲ ಭಾಗಿಯಾಗಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
Laxmi News 24×7