ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ ಎಂದು ಕಾತರದಿಂದ ಕಾಯುತ್ತ, ನಿರೀಕ್ಷೆಯಲಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಯಶ್ ಹುಟ್ಟುಹಬ್ಬದ ದಿನದಂದು ಟೀಸರ್ ಬದಲು ಚಿತ್ರದ ಎರಡನೇ ಫೋಸ್ಟರ್ ಬಿಡಿಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.
ಜನವರಿ 8 ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಹೀಗಾಗಿ ಈ ದನದಂದು ಕೆಜಿಎಫ್-2 ಚಿತ್ರದ ಟೀಸರ್ ಬಿಡುಗಡೆಮಾಡುವ ಮೂಲಕ ಅಭಿಮಾನಿಗಳಿಗೆ ಚಿತ್ರತಂಡ ಗಿಫ್ಟ್ ನೀಡಲಿದೆ ಎಂಬ ಸುದ್ದಿಯಾಗಿತ್ತು. ಆದರೆ ಇದೀಗ ನಿರ್ದೇಶಕ ಪ್ರಶಾಂತ್ ನೀಲ್, ಯಶ್ ಹುಟ್ಟುಹಬ್ಬಕ್ಕೆ ‘ಕೆಜಿಎಫ್ 2’ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿಲ್ಲ. ಕಾರಣಾಂತರದಿಂದ ಜನವರಿ 8 ರಂದು ಟೀಸರ್ ಬಿಡುಗಡೆ ಮಾಡಲು ಸಾಧ್ಯವಿಲ್ಲ, ಹೀಗಾಗಿ ಕ್ಷಮಿಸಿ ಎಂದು ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಬರೆದುಕೊಂಡಿರುವ ಪ್ರಶಾಂತ್ ನೀಲ್, ಯಶ್ ಅವರ ಹುಟ್ಟುಹಬ್ಬಕ್ಕೆ ‘ಕೆಜಿಎಫ್ 2’ ಸಿನಿಮಾದ ಟೀಸರ್ ಬಿಡುಗಡೆಯಾಗುತ್ತಿಲ್ಲ. ಯಾಕೆಂದರೆ ಇಂದಿನವರೆಗೂ ಸಿನಿಮಾ ಶೂಟಿಂಗ್ ನಡೆದಿದೆ. ನಾವೆಲ್ಲರೂ ಶೂಟಿಂಗ್ ಮುಗಿಸಿ ಜನವರಿ 7 ರಂದು ವಾಪಸ್ ಬರುತ್ತೇವೆ. ಈ ಸಿನಿಮಾದ ಬಗ್ಗೆ ನೀವೆಲ್ಲರೂ ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದೀರಾ. ಹೀಗಾಗಿ ಸಿನಿಮಾ ಔಟ್ ಕಮ್ ಬಗ್ಗೆ ನಾವು ರಾಜಿ ಆಗುವುದಿಲ್ಲ. ನಿಮಗೆ ಅತ್ಯುತ್ತಮವಾದುದ್ದನ್ನು ನೀಡಲು ನಾವು ಮುಂದಾಗಿದ್ದೇವೆ. ದಯವಿಟ್ಟು ಕ್ಷಮಿಸಿ ಎಂದು ಹೇಳಿದ್ದಾರೆ.
ಅಲ್ಲದೇ ಇದೇ ವೇಳೆ ಯಶ್ ಹುಟ್ಟುಹಬ್ಬದ ದಿನ ಟೀಸರ್ ಬದಲು ಕೆಜಿಎಫ್-2 ಸಿನಿಮಾದ ಎರಡನೇ ಪೋಸ್ಟರ್ ರಿಲೀಸ್ ಮಾಡುವುದಾಗಿ ತಿಳಿಸಿದ್ದಾರೆ.