Breaking News

ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಖಾದರ್‌ ಸರ್ಪ್ರೈಸ್ ವಿಸಿಟ್ – ಆಸ್ಪತ್ರೆ ಸಿಬ್ಬಂದಿ ಮೇಲೆ ಗರಂ

Spread the love

ಬೆಂಗಳೂರು: ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಸಚಿವ ಯು.ಟಿ ಖಾದರ್‌  ಜಯನಗರದ ಆಸ್ಪತ್ರೆಗೆ ಸರ್ಪ್ರೈಸ್ ವಿಸಿಟ್ ನೀಡಿದ್ದಾರೆ.

ಆಸ್ಪತ್ರೆಯ ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿದೆಯೇ ಎಂದು ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಪಾಳಯದಲ್ಲಿ ಸಿಬ್ಬಂದಿ ಕೊರತೆ ಇರುವುದು ಈ ವೇಳೆ ಗಮನಕ್ಕೆ ಬಂದಿದೆ. ಇನ್ನೂ ಇರುವ ಸಿಬ್ಬಂದಿ ಪೈಕಿ ಕೆಲವರು ಕೆಲಸಕ್ಕೆ ಗೈರಾಗಿದ್ದರು. ಇದರಿಂದ ಸಿಬ್ಬಂದಿ ಮೇಲೆ ಸಚಿವರು ಗರಂ ಆಗಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತಾಡಿದ ಅವರು, ಆಸ್ಪತ್ರೆಯ ನೈಜವಾದ ಪರಿಸ್ಥಿತಿ ನೋಡಲು ಬಂದೆ. ಏನೆಲ್ಲಾ ಲೋಪದೋಷವಿದೆ ಎಂದು ನೋಡಿದ್ದೇನೆ. ಎಲ್ಲಾ ಕಡೆಯೂ ವಿಸಿಟ್ ಮಾಡಿದ್ದೇನೆ. ಇವತ್ತು ಇಬ್ಬರು ವೈದ್ಯರು ಗೈರಾಗಿದ್ದರು. ಅವ್ರಿಗೆ ಇಂದು ಎಚ್ಚರಿಕೆ ನೀಡಿ, ವಿಶ್ವಾಸಕ್ಕೆ ತೆಗೆದುಕೊಂಡು, ಕೆಲಸ ಮಾಡುವಂತೆ ಸೂಚಿಸುತ್ತೇನೆ.

ಬೆಳಗ್ಗೆ ಹೊತ್ತಲ್ಲಿ ಬೇರೆ ಬೇರೆ ಕೆಲಸ, ಸಭೆಗಳು ಇರುತ್ತೆ. ಹೀಗಾಗಿ ಈ ಹೊತ್ತಲ್ಲಿ ಬಂದೆ. ಸರಿಯಾದ ಪಿಕ್ಚರ್ ಈ ಹೊತ್ತಲ್ಲೇ ಸಿಗೋದು. ಸರ್ಕಾರಿ ಆಸ್ಪತ್ರೆಗಳಿಗೆ ರೋಗಿಗಳು ಹೆಚ್ಚು ಬರ್ತಾರೆ. ಎಷ್ಟೇ ಜನ ಬಂದ್ರೂ ವೈದ್ಯರು ನೋಡಬೇಕು.

ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆಂಬುಲೆನ್ಸ್‌ಗಳ ಹಾವಳಿ ವಿಚಾರವಾಗಿ ಇಂದು ಇಲಾಖೆಯ ಪರಿಶೀಲನಾ ಸಭೆಯಿದೆ. ಅಲ್ಲಿ ಈ ಬಗ್ಗೆ ವಿಚಾರಣೆ ಮಾಡುತ್ತೇನೆ. ಯಾವ ಸಲಹೆಗಳು ಇದ್ರೂ ಅದರ ಬಗ್ಗೆ ಚರ್ಚಿಸುತ್ತೇವೆ. ವೈದ್ಯರಿಗೂ ನಿರ್ಭಯವಾದ ವಾತಾವರಣ ಸೃಷ್ಟಿಯಾಗಬೇಕು ಎಂದರು.

ಖಾತೆ ಹಂಚಿಕೆ ಬಗ್ಗೆ ರಾಮಲಿಂಗಾರೆಡ್ಡಿಯವರ  ಅಸಮಾಧಾನ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಇಲಾಖೆಯೇ ಬೇರೆ. ನನಗೆ ಗೊತ್ತಿಲ್ಲ. ಹಾಗೇನಿಲ್ಲ. ಅದ್ರ ಬಗ್ಗೆ ಆಸಕ್ತಿಯೂ ಇಲ್ಲ. ಅವ್ರಿದ್ದಾರೆ, ಪಕ್ಷದ ಮುಖಂಡರಿದ್ದಾರೆ ಎಂದರು.


Spread the love

About Laxminews 24x7

Check Also

ಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ – ಈಶ್ವರ್ ಖಂಡ್ರೆ

Spread the loveಬೆಂಗಳೂರು: ಕುಡಿಯುವ ನೀರಿಗಾಗಿ 224 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ