Breaking News

ಖನಗಾಂವ ಕೆ.ಎಚ್ ಗ್ರಾಮದಲ್ಲಿ ಶಿವಾಜೀ ಮಹಾರಾಜರ ಭವ್ಯ ಮೂರ್ತಿ ಪ್ರತಿಷ್ಠಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಭೂಮಿ ಪೂಜೆ!

Spread the love

ಅಖಂಡ ಭಾರತದ ಆರಾಧ್ಯ ದೈವ, ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯದ ಗಾಥೆ ಈಗ ಖನಗಾಂವ ಗ್ರಾಮದಲ್ಲಿ ಮೊಳಗಲಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಭವ್ಯ ಮೂರ್ತಿ ಪ್ರತಿಷ್ಠಾಪನೆಯ ಭೂಮಿ ಪೂಜೆ ನೆರವೇರಿಸುವ ಮೂಲಕ ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ.

ಹಿಂದೂ ಸಾಮ್ರಾಜ್ಯದ ಅಡಿಪಾಯ ಹಾಕಿದ ವೀರ ಕೇಸರಿ, ಅಪ್ರತಿಮ ಯೋಧ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಲ್ಲೂಕಿನ ಖನಗಾಂವ ಕೆ.ಎಚ್ ಗ್ರಾಮದಲ್ಲಿ ಇಂದು ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮೂರ್ತಿ ಪ್ರತಿಷ್ಠಾಪನೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಸ್ತ್ರೀಯರನ್ನು ತಾಯಿಯಂತೆ ಗೌರವಿಸಿದ ಶೀಲವಂತ ಚಕ್ರವರ್ತಿ ಶಿವಪ್ರಭುಗಳ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದ್ದು, ಅವರ ಸ್ಮರಣೆ ನಮಗೆಲ್ಲಾ ಸದಾ ಸ್ಪೂರ್ತಿದಾಯಕ ಎಂದು ಸಚಿವರು ಈ ಸಂದರ್ಭದಲ್ಲಿ ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಸಾನ್ನಿಧ್ಯ ವಹಿಸಿದ್ದರು. ಮ.ನಿ.ಪ್ರ ಶ್ರೀ ಶಿವಮೂರ್ತಿ ದೇವರು ಅರಳಿಕಟ್ಟಿ, ಶ್ರೀಶೈಲ ಸಾಮಿಗಳು ಹಾಗೂ ರಾಜು ಸುಳೇಭಾವಿ ಸಾಮಿಗಳ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಪ್ರಮುಖರಾದ ಮಹೇಶ ಪಾಟೀಲ, ಬಾಬಾಜಿ ಕರಡಿ ಸೇರಿದಂತೆ ಗ್ರಾಮದ ಹಿರಿಯರು ಮತ್ತು ನೂರಾರು ಶಿವಭಕ್ತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಶಿವಾಜಿ ಮಹಾರಾಜರ ಶೌರ್ಯ ಮತ್ತು ಬದುಕಿನ ಮೌಲ್ಯಗಳನ್ನು ಸಾರುವ ಈ ಮೂರ್ತಿ ಮುಂದಿನ ತಲೆಮಾರಿಗೆ ದಾರಿದೀಪವಾಗಲಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ