Breaking News

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯ…………

Spread the love

ಮುಂಬೈ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಗಿದೆ.

ದಾದಾ ಸಾಹೇಬ್ ಪಾಲ್ಕೆ ಹಾಗೂ ಮಹಾತ್ಮ ಗಾಂಧೀಜಿ ಅವರ 150ನೇ ವರ್ಷದ ಜನ್ಮದಿನೋತ್ಸವದ ಅಂಗವಾಗಿ ಮುಂಬೈನಲ್ಲಿ ಗುರುವಾರ ಅದ್ದೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುದೀಪ್ ಅವರಿಗೆ ದಾದಾ ಸಾಹೇಬ್ ಪಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.
ದಬಾಂಗ್ 3′ ಸಿನಿಮಾದ ಬಲ್ಲಿಸಿಂಗ್ ಪಾತ್ರಕ್ಕೆ ಕಿಚ್ಚನಿಗೆ ಈ ಹೆಮ್ಮೆಯ ಪ್ರಶಸ್ತಿ ಒಲಿದಿದೆ. ಪ್ರಶಸ್ತಿ ಸ್ವೀಕರಿಸಿದ ಸುದೀಪ್, ‘ದಬಾಂಗ್ 3’ ಚಿತ್ರತಂಡಕ್ಕೆ ಧನ್ಯವಾದ ಅರ್ಪಿಸಿ, ಪ್ರಶಸ್ತಿಯನ್ನು ಫ್ಯಾಮಿಲಿಗೆ ಡೆಡಿಕೇಟ್ ಮಾಡಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ