Breaking News

 ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ.

Spread the love

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಮೋಷನ್ ಪೋಸ್ಟರ್ ಸಖತ್ ಸದ್ದು ಮಾಡಿದ್ದು, ಈಗ ಚಿತ್ರ ತಂಡ ಟೀಸರ್ ರಿಲೀಸ್ ಮಾಡಲು ರೆಡಿಯಾಗಿದೆ.

ಹೌದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನೀರಿಕ್ಷಿತ ಚಿತ್ರ ಕೋಟಿಗೊಬ್ಬ-3 ಚಿತ್ರದ ಟೀಸರ್ ಅನ್ನು ಫೆಬ್ರವರಿ 21 ರಂದು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಮೂಲಕ ಶಿವರಾತ್ರಿ ಹಬ್ಬಕ್ಕೆ ಕಿಚ್ಚನ ಅಭಿಮಾನಿಗಳಿಗೆ ಬಂಪರ್ ಗಿಫ್ಟ್ ಕೊಡಲು ತಯಾರಾಗಿದೆ.

ನಿರ್ಮಾಪಕ ಸೂರಪ್ಪ ಬಾಬು ನಿರ್ಮಾಣ ಮಾಡುತ್ತಿರುವ ಕೋಟಿಗೊಬ್ಬ-3 ಚಿತ್ರವನ್ನು ಶಿವಕಾರ್ತಿಕ್ ನಿರ್ದೇಶನ ಮಾಡುತ್ತಿದ್ದಾರೆ. ಕೋಟಿಗೊಬ್ಬ-2 ಚಿತ್ರ 2016 ರಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಈಗ ಕೋಟಿಗೊಬ್ಬ-3 ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಈ ಚಿತ್ರದ ಟೀಸರ್ ಅನ್ನು ಫೆಬ್ರವರಿ 21 ಶಿವರಾತ್ರಿ ಹಬ್ಬದ ದಿನ ಮಧ್ಯಾಹ್ನ 12 ಗಂಟೆ 1 ನಿಮಿಷಕ್ಕೆ ಬಿಡುಗಡೆ ಮಾಡುತ್ತೇವೆ ಎಂದು ನಿರ್ಮಾಪಕ ಸೂರಪ್ಪ ಬಾಬು ತಿಳಿಸಿದ್ದಾರೆ.

ಜನವರಿ 14 ರಂದು ಚಿತ್ರತಂಡ ಮೋಷನ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿತ್ತು. ಪೋಸ್ಟರ್ ನಲ್ಲಿ ಕಿಚ್ಚನ ಸ್ಟೈಲಿಶ್ ಲುಕ್ ನೋಡಿದ್ದ ಅಭಿಮಾನಿಗಳು ಫಿದಾ ಆಗಿದ್ದರು. ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರಿಗೆ ನಾಯಕಿಯಾಗಿ ಮೊದಲ ಬಾರಿಗೆ ಕನ್ನಡದಲ್ಲಿ ಮಲಯಾಳಂ ನಟಿ ಮಡೋನಾ ಸೆಬಾಸ್ಟಿಯನ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ