ನವದೆಹಲಿ: ಕ್ಯಾಪ್ಟನ್ ಕೂಲ್ ಎಂದೇ ಖ್ಯಾತರಾಗಿದ್ದ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಐಪಿಎಲ್ ಟೂರ್ನಿ ಆರಂಭವಾಗುವ ಹೊಸ್ತಿಲಿನಲ್ಲಿಯೇ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಆದರೆ ಐಪಿಎಲ್‌ನಲ್ಲಿ ಅವರು ಮುಂದುವರಿಯಲಿದ್ದಾರೆ. ಧೋನಿ ಅವರೊಂದಿಗೆ ಭಾರತೀಯ ಕ್ರಿಕೆಟ್ ತಂಡಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದಾರೆ. ಭಾರತ ಕ್ರಿಕೆಟ್‌ನ ಹೀರೋಗಳಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ, 15 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕನ್ನು ಅಂತ್ಯಗೊಳಿಸಿದ್ದಾರೆ. ಇದರಲ್ಲಿ ನಾಯಕರಾಗಿ ಏಕದಿನ ಮತ್ತು ಟಿ20 ವಿಶ್ವಕಪ್‌ಗಳನ್ನು ಗೆದ್ದು ತಂದ ಖ್ಯಾತಿ ಅವರಿಗಿದೆ.