Breaking News

ಮರಾಠಾ ಅಭಿವೃದ್ಧಿ ನಿಗಮಕ್ಕೆ ಸಾವಿರ ಕೋಟಿ ರೂ.ಅನುದಾನ ನೀಡಿ: ಕಿರಣ್ ಜಾಧವ್ ಆಗ್ರಹ

Spread the love

ಬೆಳಗಾವಿ : ಕರ್ನಾಟಕ ರಾಜ್ಯದಲ್ಲಿ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಮರಾಠಾ ಸಮಯದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ವಿಶೇಷ ಆದ್ಯತೆ ನೀಡುವ ಮೂಲಕ ಕರ್ನಾಟಕ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಕನಿಷ್ಠ ಸಾವಿರ ಕೋಟಿ ರೂ.ಅನುದಾನ ಮೀಸಲಿಡಬೇಕು ಎಂದು ಮರಾಠಾ ಮುಖಂಡ ಕಿರಣ್ ಜಾಧವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ನಿಗಮಕ್ಕೆ ಪ್ರಸ್ತುತ ನೀಡಲಾಗುತ್ತಿರುವ ಅನುದಾನ ಸಮುದಾಯದ ಅಗತ್ಯಗಳಿಗೆ ತಕ್ಕಂತೆ ಸಾಲುತ್ತಿಲ್ಲ. ಯಾವಾಗಲೂ ಸಾಮಾಜಿಕ ಸಮಾನತೆಗೆ ಆದ್ಯತೆ ನೀಡುವ ಸಿದ್ದರಾಮಯ್ಯ ಅವರು, ಈ ಬಾರಿ ಬಜೆಟ್‌ನಲ್ಲಿ ಹೆಚ್ಚಿನ ಮೊತ್ತ ಮೀಸಲಿಟ್ಟು ನಿಗಮದ ಮೂಲಕ ವಿದ್ಯಾರ್ಥಿವೇತನ, ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು, ವಿದೇಶ ವ್ಯಾಸಂಗ ಸಹಾಯಧನ ಹಾಗೂ ಕೃಷಿ ಮತ್ತು ಪಶು ಸಂಗೋಪನೆ ಚಟುವಟಿಕೆಗಳಿಗೆ ಪ್ರೋತ್ಸಾಹ ಸೇರಿದಂತೆ ವಿಶೇಷ ಯೋಜನೆಗಳನ್ನು ಜಾರಿಗೆ ತರಬೇಕು.‌ಮುದಾಯದ ನಿರುದ್ಯೋಗಿ ಯುವಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಿ, ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಮರಾಠಾ ಸಮುದಾಯದವರು ಶಿಕ್ಷಣ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಇನ್ನೂ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಈ ಬಜೆಟ್‌ನಲ್ಲಿ ಸಮುದಾಯದ ಆಶೋತ್ತರಗಳಿಗೆ ಸ್ಪಂದಿಸಿ, ಮರಾಠಾ ಅಭಿವೃದ್ಧಿ ನಿಗಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು, ಎಂದು ಕಿರಣ್ ಜಾಧವ್ ಹೇಳಿದ್ದಾರೆ.


Spread the love

About Laxminews 24x7

Check Also

43 ವರ್ಷಗಳ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವ ದೇವಿಯ ಮಂಟಪ ಸ್ಥಳದಲ್ಲಿ ಚನ್ನರಾಜ ಹಟ್ಟಿಹೊಳಿ ಪೂಜೆ

Spread the loveಬೆಳಗಾವಿ: ಸುಮಾರು 43 ವರ್ಷಗಳ ದೀರ್ಘ ವಿರಾಮದ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ