Breaking News

ಸೇತುವೆಗೆ ಆಟೋ ಡಿಕ್ಕಿ – ಇಬ್ಬರು ಸಾವು

Spread the love

ಚಾಮರಾಜನಗರ: ಆಟೋ ಮಗುಚಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ನರಿಪುರ-ಮಧುವನಹಳ್ಳಿ ಬೈಪಾಸ್ ಮುಖ್ಯರಸ್ತೆಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಬೆಂಗಳೂರು ರಾಜಗೋಪಾಲನಗರ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಲಕ್ಷ್ಮಿಕಾಂತ್ ಎಂಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನರಿಪುರ-ಮಧುವನಹಳ್ಳಿ ಬೈಪಾಸ್ ಮುಖ್ಯ ರಸ್ತೆಯಲ್ಲಿರುವ ಮಧುವನಹಳ್ಳಿ ಪ್ರದೀಪ್ ಎಂಬವರ ಜಮೀನಿನ ಹತ್ತಿರ ಘಟನೆ ನಡೆದಿದೆ.

ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಗೊಂಡ ಲಕ್ಷ್ಮಿಕಾಂತ್ ಎಂಬ ವ್ಯಕ್ತಿಯನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾದೆ.

ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಚೆಲುವರಾಜು ಹಾಗೂ ಸರ್ಕಲ್ ಇನ್‌ಸ್ಪೆಕ್ಟರ್‌ ರವೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ