Breaking News

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

Spread the love

ಬೆಂಗಳೂರು: ಮೈಸೂರಿನ  ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್  ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಚಿರತೆಯಿಂದ  ಅತ್ತೆ ಕಾಪಾಡಿದ ಸೊಸೆ ಪವಿತ್ರಾ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡುವ ಭರವಸೆಯನ್ನೂ ನೀಡಿದ್ದಾರೆ. ಈ ಘಟನೆ ಆಕಸ್ಮಿಕವಾದರೂ, ಅದು ಮಹಿಳೆಯೊಬ್ಬರ ಅಪ್ರತಿಮ ಧೈರ್ಯ ಮತ್ತು ಅತ್ತೆ-ಸೊಸೆಯ ಪವಿತ್ರ ಬಾಂಧವ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಸಚಿವರು ಬಣ್ಣಿಸಿದ್ದಾರೆ.

ತಮ್ಮ ಮನೆಯ ಮಂಚದಡಿ ಚಿರತೆ ಅಡಗಿರುವುದು ತಿಳಿಯುತ್ತಿದ್ದಂತೆಯೇ, ಪ್ರಾಣದ ಹಂಗು ತೊರೆದು ಕೊಠಡಿಗೆ ನುಗ್ಗಿ, ವಯಸ್ಸಾದ ಅತ್ತೆಯನ್ನು ಅಪ್ಪಿಕೊಂಡು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರ ಸಾಹಸ ನಿಜಕ್ಕೂ ರೋಮಾಂಚನಕಾರಿ. ಸಾಕ್ಷಾತ್ ಮೃತ್ಯುವಿನ ದವಡೆಯಿಂದ ಅತ್ತೆಯನ್ನ ರಕ್ಷಿಸಿದ ಅವರ ಸಮಯಪ್ರಜ್ಞೆ ಇಡೀ ಮಹಿಳಾ ಕುಲಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ.

ಅತ್ತೆ-ಸೊಸೆಯ ಸಂಬಂಧದ ಬಗ್ಗೆ ಸಮಾಜದಲ್ಲಿರುವ ಹಳೆಯ ಕಲ್ಪನೆಗಳನ್ನ ಅಳಿಸಿ, ಸುಜಾತಾ ಅವರು ಇಂದು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆಯಾಗಿ, ಸುಜಾತಾ ಅವರ ಈ ಅಸಾಧಾರಣ ಶೌರ್ಯವನ್ನ ನಾನು ಮನತುಂಬಿ ಶ್ಲಾಘಿಸುತ್ತೇನೆ. ಅವರ ಈ ಸಾಹಸವನ್ನ ಗೌರವಿಸಲು ಮುಂದಿನ ವರ್ಷದ ʻಕಿತ್ತೂರು ರಾಣಿ ಚೆನ್ನಮ್ಮ ಸಾಹಸ ಪ್ರಶಸ್ತಿʼ ಗೆ ಅವರ ಹೆಸರನ್ನು ಪರಿಗಣಿಸಲು ನಮ್ಮ ಇಲಾಖೆಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ʻಧೈರ್ಯವಂತ ಮಹಿಳೆಯರೇ ಈ ನಾಡಿನ ನಿಜವಾದ ಶಕ್ತಿ. ಸುಜಾತಾ ಅವರ ಈ ಶೌರ್ಯದ ಗಾಥೆ ಮನೆಮನಗಳಿಗೆ ತಲುಪಲಿ ಎಂದಿದ್ದಾರೆ ಸಚಿವರು.


Spread the love

About Laxminews 24x7

Check Also

ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಕೊಲೆಯೋ, ಅಸಹಜ ಸಾವೋ?

Spread the loveನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಗಡಿ ಗ್ರಾಮ ಹಳೇ ನಿಜಗಲ್ ಗ್ರಾಮದಲ್ಲಿ ಮಹಿಳೆಯ ತಲೆಬುರುಡೆ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ