Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಉದ್ದೇಶಪೂರ್ವಕವಾಗಿ ಲಾಠಿ ಬೀಸಬಾರದು: ಮಹಾಂತೇಶ ಕವಟಗಿಮಠ

ಉದ್ದೇಶಪೂರ್ವಕವಾಗಿ ಲಾಠಿ ಬೀಸಬಾರದು: ಮಹಾಂತೇಶ ಕವಟಗಿಮಠ

Spread the love

ಚಿಕ್ಕೋಡಿ : ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿಯೂ ಎಲ್ಲ ಜನರಿಗೂ ಮಾಸ್ಕ ವಿತರಿಸುವ ಮೂಲಕ ಸಾಮಾಜಿಕ ಅಂತರಕಾಯ್ದುಕೊಳ್ಳುವಂತೆ ಕೊರೊನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಧಿಕಾರಿಗಳು ಮಾಡಬೇಕು ಎಂದು ವಿಧಾನಪರಿಷತ್‍ನ ಸರಕಾರಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

ಪಟ್ಟಣದ ಮಿನಿವಿಧಾನ ಸೌಧದಲ್ಲಿ ಸೋಮವಾರ ನಡೆದ ಅಧಿಕಾರಿಗಳಸಭೆಯಲ್ಲಿ ಮಾತನಾಡಿದ ಅವರು, ತರಕಾರಿ ಮಾರಾಟಕ್ಕೆ ಹೋಗುವವರು ಹಾಗೂ ಅಟೋದವರು ಕಡ್ಡಾಯವಾಗಿ ಮಾಸ್ಕ
ಹಾಕಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಸಹ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಅಧಿಕಾರಿಗಳು ಸಹ ಮಾಸ್ಕ್ ಹಾಕಿಕೊಂಡು ಹೋಗಬೇಕು ಎಂದು ಹೇಳಿದರು.

ಈಗಾಗಲೇ ಮಾರ್ಚ ತಿಂಗಳ ಪಡಿತರ ಧಾನ್ಯ ಬಂದಿದೆ. ಇಷ್ಟರಲ್ಲಿಯೇ ಏಪ್ರೀಲ್ ಮತ್ತು ಮೇ ತಿಂಗಳ ಪಡಿತರ ದಾನ್ಯ ಬರಲಿದ್ದು, ಅಲ್ಲಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಚಿಕ್ಕೋಡಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಮಾಡಬೇಕು. ಜನರು ಸುಮ್ಮನೆ ಸುಮ್ಮನೆ ಕಿರಾಣಿ ನೆಪ ಹೇಳಿ ಅಲೆಯುವ ಕೆಲಸವಾಗುತ್ತಿದೆ. ಆದ್ದರಿಂದ ಆದಷ್ಟು ಕಿರಾಣಿ ಅಂಗಡಿಗಳನ್ನು ಬಂದ ಮಾಡುವ ಕೆಲಸವಾಗಬೇಕು. ಇಡೀ ದೇಶ ಸಂಕಷ್ಟದಲ್ಲಿದೆ. ಆದ್ದರಿಂದ ಕೊರೊನಾ ವೈರಸ್ ಹರಡದಂತೆ ಜಾಗೃತಿವಹಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯ. ಆದ್ದರಿಂದ ಜನರಲ್ಲಿ ಈ ಕುರಿತು ನಾವು ಜಾಗೃತಿ ಮೂಡಿಸುವ ಕೆಲಸ
ಮಾಡಬೇಕಾಗಿದೆ.

ಚಿಕ್ಕೋಡಿ ಉಪವಿಭಾಗದಲ್ಲಿ ಯಾರಾದರೂ ಅಧಿಕಾರಿಗಳು ಅನಾರೋಗ್ಯದಿಂದ ಬಳಲುತ್ತಿದ್ದರೇ ಅಂತವರಿಗೂ ರಜೆ ಕೊಟ್ಟು ಕಳುಹಿಸಬೇಕು. ಏಕೆಂದರೇ ಮೊದಲು ಆರೋಗ್ಯವಂತರಾಗಿದ್ದರೇ ಮಾತ್ರ ನಮ್ಮಿಂದ ಕರ್ತವ್ಯ ಸರಿಯಾಗಿ ನಿರ್ವಹಿಸಲು ಸಾಧ್ಯ ಎಂದು ತಿಳಿಸಿದರು.

ಮಹಾರಾಷ್ಟ್ರದಲ್ಲಿರುವ ಸಾರ್ವಜನಿಕರು ಇರುವ ಜಾಗದಲ್ಲಿಯೇಇರಬೇಕು. ಮಹಾರಾಷ್ಟ್ರದಿಂದ ಬರುವ ಕನ್ನಡಿಗರನ್ನು ಗಡಿ ಭಾಗದಲ್ಲಿಯೇ ಸಮುದಾಯ ಭವನದಲ್ಲಿ ಅವರಿಗೆ ಊಟ ಮತ್ತು ವ್ಯವಸ್ಥೆ ಮಾಡಿ ಅಲ್ಲಿಯೇ ಇಡುವಂತೆ ಕೊಲ್ಲಾಪೂರ ಮತ್ತು ಸಾಂಗ್ಲಿ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ.ವಕರ್ನಾಟಕದಿಂದ ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ
ಪ್ರದೇಶ ಮುಂತಾದ ಕಡೆಗೆ ಹೋಗುವ ಜನರನ್ನು ನಾವು ನಮ್ಮ ಗಡಿಯಿಂದ ಹೊರಗೆ ಬಿಡುತ್ತಿಲ್ಲ. ಅವರಿಗೆ ನಿಪ್ಪಾಣಿ ಮತ್ತು ಚಿಕ್ಕೋಡಿಯ ಗಡಿಯಲ್ಲಿಯೇ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ಈ ರಾಜ್ಯದ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ಹೇಳಿದರು.

ಇಡೀ ವಿಶ್ವವೇ ಎದುರಿಸುತ್ತಿರುವ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಸಾರ್ವಜನಿಕರು
ಸರಕಾರದೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಬೆಳಗಾವಿಯಲ್ಲಿ ಪೊಲೀಸರು ಆರೋಗ್ಯ ಇಲಾಖೆ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಇದರ ಬಗ್ಗೆ ನೀವೇನೂ ಹೇಳುತ್ತೀರಿ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ರೀತಿ ಯಾರ ಮೇಲೂ ಹಲ್ಲೇಯಾಗಬಾರದು ಎಂದು ಪೊಲೀಸ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾರೂ ಕೂಡ ಉದ್ದೇಶಪೂರ್ವಕವಾಗಿ ಓಡಾಡುವುದಿಲ್ಲ. ಅದರಲ್ಲಿಯೂ ಆರೋಗ್ಯ ಇಲಾಖೆಯ ಸಿಬ್ಬಂದಿ ಮೇಲೆ ಹಲ್ಲೇ ಮಾಡಿರುವುದು ತಪ್ಪು. ಅವರಿಗೆ ರಕ್ಷಣ
ಕೊಡುವುದು ನಮ್ಮ ಕರ್ತವ್ಯ. ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೇ ನಡೆಸಿದ ಪೊಲೀಸ ಪೇದೆ ವಿರುದ್ಧ ಕ್ರಮ ಜರುಗಿಸಲು ಪೊಲೀಸ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನವರ, ಡಿಎಸ್ಪಿ ಮನೋಜ ನಾಯಿಕ, ತಹಸೀಲ್ದಾರ ಎಸ್.ಎಸ್.ಸಂಪಗಾಂವಿ, ಟಿಎಚ್‍ಓ ಡಾ. ವಿ.ವಿ.ಶಿಂಧೆ, ಆರ್‍ಟಿಓ ಭೀಮನಗೌಡ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಸುಂದರ ರೋಗಿ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್.ಪಾಟೀಲ, ತಾಲೂಕಾ ಸಮಾಜ ಕಲ್ಯಾಣಾಧಿಕಾರಿ ಎಂ.ಎಸ್.ಉಳ್ಳಾಗಡ್ಡಿ, ಸಿ.ಎ.ಪಾಟೀಲ, ಸಿಡಿಪಿಒ ಗೀತಾ ಕಾಳೆ, ಸಿಪಿಐ ಆರ್.ಆರ್.ಪಾಟೀಲ ಮುಂತಾದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ವೀರಮರಣ ಹೊಂದಿದ ಕ್ಯಾ. ಪ್ರಾಂಜಲ್​ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸಹಾಯಾರ್ಥವಾಗಿ ಚೆಕ್​ ವಿತರಣೆ

Spread the love ಆನೇಕಲ್: ದೇಶಕ್ಕಾಗಿ ಉಗ್ರರ ವಿರುದ್ಧದ ಹೋರಾಟದಲ್ಲಿ ವೀರಮರಣ ಹೊಂದಿದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ಕೊಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ