ಕಲಬುರಗಿ: ಇಂದು ಜಿಲ್ಲೆಯಲ್ಲಿ ಆರು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕಲಬುರಗಿ ಜಿಲ್ಲಾಡಳಿತ ತಿಳಿಸಿದೆ.
ಸಂಜೆ ಆಳಂದ ನಿವಾಸಿ 54 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಸಚಿವ ಸುಧಾಕರ್ ದೃಢಪಡಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಮತ್ತೆ 6 ಮಂದಿಗೆ ಕೊರೊನಾ ತಗುಲಿರೋದು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಸೋಂಕಿತರ ವಿವರವನ್ನು ಜಿಲ್ಲಾಡಳಿತ ಪ್ರಕಟಿಸಿಲ್ಲ. ಕಲಬುರಗಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.

ಇಂದು ಬೆಳಗ್ಗೆ ಬಿಡುಗಡೆಯಾದ ಬುಲೆಟಿನ್ ನಲ್ಲಿ 8 ಜನಕ್ಕೆ ಮತ್ತು ಸಂಜೆ ಬುಲೆಟಿನ್ ನಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿರೋದನ್ನು ಆರೋಗ್ಯ ಇಲಾಖೆ ಖಚಿತಪಡಿಸಿತ್ತು. ಸದ್ಯ ಕಲಬುರಗಿಯಲ್ಲಿ ಹೊಸ 6 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು ಒಟ್ಟು 15 ಮಂದಿಗೆ ಸೋಂಕು ತಗುಲಿದೆ.

ಇಂದು ಮೃತ ವ್ಯಕ್ತಿಗೆ ಏಪ್ರಿಲ್ 21ರಂದು ಕೊರೊನಾ ಪಾಸಿಟಿವ್ ಬಂದಿತ್ತು. ಉಸಿರಾಟದ ತೊಂದರೆಯಿಂದ ಜಿಮ್ಸ್ ಗೆ ದಾಖಲಾಗಿದ್ದು, ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
Laxmi News 24×7