Breaking News

ಕಲಬುರಗಿ ನಗರದಲ್ಲಿ ತಾಯಿ-ಮಗು ಸೇರಿದಂತೆ ಮತ್ತೆ ಮೂವರು ರೋಗಿಗಳು ಕೊರೊನಾ ಸೋಂಕಿನಿಂದ ಗುಣಮುಖ

Spread the love

ಕಲಬುರಗಿ: ಕಲಬುರಗಿ ನಗರದಲ್ಲಿ ತಾಯಿ-ಮಗು ಸೇರಿದಂತೆ ಮತ್ತೆ ಮೂವರು ರೋಗಿಗಳು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ನಗರದ ಮೋಮಿನಪುರ ಪ್ರದೇಶದ 26 ವರ್ಷದ ಮಹಿಳೆ (ರೋಗಿ ಸಂಖ್ಯೆ-425) ಹಾಗೂ ಇವರ ನಾಲ್ಕು ತಿಂಗಳ ಗಂಡು ಮಗು (ರೋಗಿ ಸಂಖ್ಯೆ-424) ಹಾಗೂ ಮಾಣಿಕೇಶ್ವರಿ ನಗರದ 46 ವರ್ಷದ ಮಹಿಳೆ (ರೋಗಿ ಸಂಖ್ಯೆ-421) ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.

ಈ ಮೂವರಿಗೂ ಏ.22ರಂದು ಕೊರೊನಾ ಸೋಂಕು ದೃಢವಾಗಿದ್ದರಿಂದ ಚಿಕಿತ್ಸೆಗೆ ದಾಖಲಾಗಿದ್ದರು. ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಪತ್ತೆಯಾದ 64 ಕೊರೊನಾ ಸೋಂಕಿತರಲ್ಲಿ ಒಟ್ಟು 27 ರೋಗಿಗಳು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 6 ಜನ ನಿಧನ ಹೊಂದಿದ್ದು, 31 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ಶರತ್ ಬಿ. ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ

Spread the loveಕಲಬುರಗಿ: ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ  ಶಿವಾಜಿ ಜಯಂತಿ  ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ