ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಘೋಷಿಸಿದ್ದು, ಇಂದು 73 ನೇ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ 1,300 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ರ ಪುತ್ತಳಿಗೆ ಪೂಜೆ ಸಲ್ಲಿಸಿ ಸಿಎಂ ಮಲಾರ್ಪಣೆ ಮಾಡಿದರು. ನಂತರ ಡಿಎಆರ್ ಮೈದಾನದಲ್ಲಿ ದ್ವಜಾರೋಹಣ ನೇರವೇರಿಸಿದರು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಮಳೆಯ ನಡುವೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಏನೇನು ಕಾರ್ಯಕ್ರಮ ರೂಪಿಸಬೇಕು ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ.
ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿ ವಿಭಾಗದಲ್ಲಿ ಸ್ವಾತಂತ್ರ್ಯ ಸಂಭ್ರಮ ಕಳೆಗಟ್ಟಿದೆ.
ಬ್ರಿಟಿಷರಿಂದ ದೇಶಕ್ಕೆ ಆಗಸ್ಟ್ 15 ರಂದು ಸ್ವಾತಂತ್ರ್ಯ ಸಿಕ್ಕಿದೆ. ಅಂದಿನ ಹೈದರಾಬಾದ್ ಕರ್ನಾಟಕ, ಈಗಿನ ಕಲ್ಯಾಣ ಕರ್ನಾಟಕ ಸೆ. 17 ರಂದು ಸ್ವಾತಂತ್ರ್ಯ ಸಿಕ್ಕಿತು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುತ್ತದೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??