ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶೇಷ ವಿಮಾನ ಮೂಲಕ ಗುರುವಾರ ಕಲಬುರಗಿಗೆ ಬಂದಿಳಿದರು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗಿಯಾಗಲು ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಜೊತೆಗೆ ಉಪ ಮುಖ್ಯಮಂತ್ರಿಗಳು ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸಹ ಆಗಮಿಸಿದರು.
ಆರ್ ಸಿ ಡಾ.ಎನ್.ವಿ.ಪ್ರಸಾದ, ಐ.ಜಿ.ಪಿ. ಮನೀಷ ಖರ್ಬಿಕರ್, ಡಿಸಿ ವಿ.ವಿ. ಜ್ಯೋತ್ಸ್ನಾ, ಪೊಲೀಸ್ ಆಯುಕ್ತ ಸತೀಷ ಕುಮಾರ, ಎಸ್ ಪಿ ಸಿಮಿ ಮರಿಯನ್ ಜಾರ್ಜ್ ಅವರು ಮುಖ್ಯಮಂತ್ರಿಗಳಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡರು.
ಬಸವನಬಾಗೇವಾಡಿ ತಾಲೂಕಿನಲ್ಲಿ ಲಘು ಭೂಕಂಪ: ಮನೆಗಳಿಂದ ಹೊರ ಓಡಿದ ಜನರು
ಪೋಲೀಸ್ ಬ್ಯಾಂಡ್ ವೃಂದದಿಂದ ಮುಖ್ಯಮಂತ್ರಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು.
ಜಿಲ್ಲೆಯ ಕಾರ್ಯಕ್ರಮಗಳ ನಂತರ ಇಂದು ಸಂಜೆ ಇಲ್ಲಿಂದಲೇ ಸಿಎಂ ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಎನ್.ಇ.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ, ಸಂಸದ ಡಾ. ಉಮೇಶ ಜಾಧವ್, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್,
ಶಾಸಕರಾದ ಬಸವರಾಜ್ ಮತ್ತಿಮೂಡ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ. ಪಾಟೀಲ್ ಸೇರಿದಂತೆ ಮುಂತಾದವರಿದ್ದರು