Breaking News

ಕೊಕ್ಕನೂರು ಶಾಲೆ ಮುಖ್ಯ ಶಿಕ್ಷಕ ಆತ್ಮಹತ್ಯೆ ಕೇಸ್‌ – 11 ಮಂದಿ ವಿರುದ್ಧ ಎಫ್‌ಐಆರ್

Spread the love

ದಾವಣಗೆರೆ:‌ ಕೊಕ್ಕನೂರು ಸರ್ಕಾರಿ ಶಾಲೆಯ  ಮುಖ್ಯ ಶಿಕ್ಷಕ ಜಯಪ್ಪ (54) ಆತ್ಮಹತ್ಯೆ ಪ್ರಕರಣದಲ್ಲಿ ಶಾಲಾ ಸಹ ಶಿಕ್ಷಕರು, ಬಿಸಿಯೂಟದ ನಾಲ್ವರು ಅಡುಗೆ ಸಿಬ್ಬಂದಿ, ಸಿಆರ್‌ಪಿ ಹಾಗೂ ಬಿಆರ್‌ಪಿ ಸೇರಿದಂತೆ ಒಟ್ಟು 11 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಜಯಪ್ಪ ಪತ್ನಿ ಅಂಜನಮ್ಮ ನೀಡಿದ ದೂರಿನ ಮೇರೆಗೆ ಮಲೇಬೆನ್ನೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮಾನಸಿಕ ಕಿರುಕುಳ ಹಾಗೂ ಜಾತಿನಿಂದನೆ ಆರೋಪದಡಿ ಸಿಆರ್‌ಪಿ, ಬಿಆರ್‌ಪಿ, ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ, ಮಹಾಂತೇಶ್ ಗೌಳಿ, ಅಡುಗೆ ಸಹಾಯಕರಾದ ಸುಮಾ, ಚೆನ್ನಮ್ಮ, ರೂಪಾ, ವಿಜಯಮ್ಮ ಸೇರಿದಂತೆ 11 ಮಂದಿ ವಿರುದ್ಧ ಎಫ್‌ಐಆರ್ ಆಗಿದೆ.

ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಜಯಪ್ಪ ಮಾನಸಿಕ ಕಿರುಕುಳ ಹಾಗೂ ಜಾತಿನಿಂದನೆಯ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಬಳಿಕ ಜಯಪ್ಪ ಪತ್ನಿ ಅಂಜನಮ್ಮ ಘಟನೆಯ ಸಂಬಂಧ ಮಲೇಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಬಂಧನದ ಭೀತಿಯಿಂದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹ ಶಿಕ್ಷಕರು ತಲೆಮರೆಸಿಕೊಂಡಿದ್ದಾರೆ.

ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ತೊಂದರಯಾಗದಂತೆ ತಾತ್ಕಾಲಿಕವಾಗಿ ಅನುದಾನಿತ ಶಾಲಾ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಪೊಲೀಸರು ಗ್ರಾಮಸ್ಥರ ಜೊತೆ ಸಭೆ ನಡೆಸಿ ಶಾಂತಿಯುತವಾಗಿ ನಡೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ