Breaking News

ಕೋಲಾರದಲ್ಲಿ ಚಿಕಿತ್ಸೆ ಫಕಲಾರಿಯಾಗದೆ ಕೊರೊನಾಗೆಮೊದಲ ಬಲಿ

Spread the love

ಕೋಲಾರ: ಹೆಮ್ಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮುಂದುರಿಸಿದ್ದು, ಕೋಲಾರದಲ್ಲಿ ಚಿಕಿತ್ಸೆ ಫಕಲಾರಿಯಾಗದೆ ಕೊರೊನಾಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯ ಕೆಜಿಎಫ್ ತಾಲೂಕಿನ ತೂಕಲ್ಲು ಗ್ರಾಮದ ರೋಗಿ 8495, 43 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಕಳೆದ ಒಂದು ವಾರದಿಂದ ಜಾಲಪ್ಪಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ ಎಂದು ಕೆಜಿಎಫ್ ತಹಶೀಲ್ದಾರ್ ರಮೇಶ್ ಮಾಹಿತಿ ನೀಡಿದ್ದಾರೆ.

ಕಳೆದ 10 ದಿನಗಳ ಹಿಂದೆ ದೆಹಲಿಯಿಂದ ತೂಕಲ್ಲು ಗ್ರಾಮಕ್ಕೆ ಮದುವೆಗೆಂದು ಮಹಿಳೆ ಆಗಮಿಸಿದ್ದರು. ಈ ವೇಳೆ ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು. ತಕ್ಷಣ ಅವರು ಜಾಲಪ್ಪಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾರೆ. ಈ ಮೂಲಕ ಕೋಲಾರ ಜಿಲ್ಲೆಯಲ್ಲಿ ಆತಂಕ ಮೂಡಿದೆ.

ಕೋಲಾರದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸೊಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 81 ಜನ ಸೋಂಕಿತರ ಪೈಕಿ, ಜಾಲಪ್ಪ ಆಸ್ಪತ್ರೆಯಲ್ಲಿಯೇ 14 ಜನ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ


Spread the love

About Laxminews 24x7

Check Also

ಎಲ್ಲಾ ಶಾಸಕರು ಪಂಚಮಸಾಲಿ ‌ಮೀಸಲಾತಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಇಲ್ಲವಾದ್ರೆ ಜನರಿಂದ ನೀವು ದೂರವಾಗು ಕಾಲ ಬರಲಿದೆ.

Spread the love2A ಮೀಸಲಾಗಿಗೆ ಆಗ್ರಹಿಸಿ ಪಂಚಮಸಾಲಿ ‌ಶ್ರೀ‌ಹೋರಾಟಕ್ಕೆ ಕರೆ. ಡಿಸೆಂಬರ್ ‌10ರಂದು ಬೆಳಗಾವಿ ನಗರಕ್ಕೆ ಟ್ರ್ಯಾಕ್ಟರ್, ಕ್ರೂಸರ್ ನಿಷೇಧ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ