Breaking News

ಹಳಿ ತಪ್ಪಿದ ಕೋಲ್ಕತ್ತಾ–ಸೈರಾಂಗ್ ಎಕ್ಸ್‌ಪ್ರೆಸ್ ರೈಲು; ಹಲವು ಪ್ರಯಾಣಿಕರಿಗೆ ಗಾಯ

Spread the love

ಗುವಾಹಟಿ: ಕೋಲ್ಕತ್ತಾದಿಂದ ಮಿಜೋರಾಂಗೆ ತೆರಳುತ್ತಿದ್ದ ಪ್ರಯಾಣಿಕ ರೈಲಿನ ಐದು ಬೋಗಿಗಳು ಇಂದು ಬೆಳಗ್ಗೆ ಅಸ್ಸಾಂನಲ್ಲಿ ಹಳಿ ತಪ್ಪಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಕೆಲವೇ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಅಸ್ಸಾಂನ ಡಿಗಾರು ರೈಲು ನಿಲ್ದಾಣದ ಬಳಿ, ಬೆಳಗ್ಗೆ 6:54ಕ್ಕೆ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌ ರೈಲಿಗೆ ಅಪಘಾತ ಸಂಭವಿಸಿದೆ.

ಒಂದು ರೈಲಿಗೆ ದಾರಿ ಮಾಡಿಕೊಡಲು ಈ ರೈಲು ಪ್ರಯತ್ನಿಸಿದಾಗ, ಅದರ ಚಾಲಕನಿಗೆ (ಲೋಕೋ ಪೈಲಟ್) ವೇಗವನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಇದರ ಪರಿಣಾಮವಾಗಿ ರೈಲು ಹಳಿ ತಪ್ಪುವ ದುರದೃಷ್ಟಕರ ಘಟನೆ ಸಂಭವಿಸಿದ್ದು, ಇದರಲ್ಲಿ ಎಂಜಿನ್ (ಲೋಕೋಮೋಟಿವ್) ಮತ್ತು ಐದು ಬೋಗಿಗಳು ಹಳಿ ತಪ್ಪಿದವು ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಪ್ರಯಾಣಿಕರಿಗಾಗಿ ಪರ್ಯಾಯ ರೈಲಿನ ವ್ಯವಸ್ಥೆ ಮಾಡಲಾಯಿತು ಎಂದು ರೈಲ್ವೆ ಇಲಾಖೆ ತಿಳಿಸಿದೆ. ತಕ್ಷಣವೇ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಆರಂಭಗೊಂಡಿದ್ದು, ರೈಲ್ವೆ ಅಧಿಕಾರಿಗಳು ಅಪಘಾತ ಸ್ಥಳವನ್ನು ತಲುಪಿದ್ದಾರೆ.

ರೈಲು ಅವಘಡದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಜನರು ಚಿಕಿತ್ಸೆ ಪಡೆಯುತ್ತಿರುವ ದೃಶ್ಯ ಕಂಡುಬಂತು.


Spread the love

About Laxminews 24x7

Check Also

ಮುಂದಿನ ವರ್ಷ 3 ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಡಿಕೆಶಿ ಘೋಷಣೆ

Spread the loveಮೈಸೂರು: ಮುಂದಿನ ವರ್ಷ ಮೂರು ದಿನಗಳ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ