ಕೊಪ್ಪಳ: ಎರಡು ಲಾರಿಗಳ (Lorry) ನಡುವೆ ಅಪಘಾತ (Accident)ನಡೆದಿರುವ ಘಟನೆ ಕೊಪ್ಪಳ ತಾಲೂಕಿನ ಹಲಗೇರಿ ಬಳಿ ತಡರಾತ್ರಿ ನಡೆದಿದೆ. ಅಪಘಾತಕ್ಕೆ ಎರಡು ಲಾರಿಗಳು ನುಜ್ಜು ಗುಜ್ಜಾಗಿವೆ. ಅಪಘಾತದ ರಭಸಕ್ಕೆ ಎರಡು ಲಾರಿಗಳ ನಡುವೆ ನಾಲ್ವರು ಸಿಕ್ಕಿಹಾಕಿಕೊಂಡಿದ್ದು, ಸತತ ಒಂದು ಗಂಟೆಗಳ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಆ ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಒಂದು ಲಾರಿಯಲ್ಲಿ ಮೂರು ಜನ, ಇನ್ನೊಂದು ಲಾರಿಯಲ್ಲಿ ಓರ್ವ ಚಾಲಕ ಸಿಕ್ಕಿಹಾಕಿಕೊಂಡಿದ್ದ. ಲಾರಿಗಳು ಮಧ್ಯಪ್ರದೇಶ ಹಾಗೂ ಬೆಂಗಳೂರು ಮೂಲದ ಎಂದು ತಿಳಿದುಬಂದಿದೆ.
ಎರಡು ಲಾರಿಗಳು ಹೊಸಪೇಟೆ ಕಡೆ ಹೊರಟಿದ್ದವು. ಒವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದ್ದು, ನಾಲ್ವರು ಲಾರಿಯಲ್ಲೇ ಸಿಕ್ಕಿಕೊಂಡಿದ್ದರು. ಸದ್ಯ ಅಗ್ನಿ ಶಾಮಕ ದಳ ಸಿಬ್ಬಂದಿ ಲಾರಿಯಲ್ಲಿದ್ದ ನಾಲ್ವರನ್ನು ಹೊರತೆಗೆದಿದೆ.
ಈ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಲಾರಿಯಲ್ಲಿ ಸಿಕ್ಕಿಕೊಂಡಿದ್ದವರನ್ನು ಅಗ್ನಿ ಶಾಮಕ ದಳ ಸಿಬ್ಬಂದಿ ರಕ್ಷಿಸಿದೆ
ಕಾಡಾನೆ ದಾಳಿಯಿಂದ ಬೆಳೆ ನಾಶ
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ. ಕಾಡಾನೆ ಓಡಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ, ಮೆಣಸು ಬೆಳೆಯನ್ನು ಕಾಡಾನೆ ಹಾಳು ಮಾಡಿದೆ. ಕಾಡಾನೆಗಳ ನಿರಂತರ ದಾಳಿಯಿಂದ ಕಂಗೆಟ್ಟಿರುವ ರೈತರು ಅರಣ್ಯ ಸಿಬ್ಬಂದಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
Laxmi News 24×7