ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದ ಸುಮಾರು 5 ಲಕ್ಷ ರೂ. ಚೆಕ್ ಗಳನ್ನು ಹಸ್ತಾಂತರಿಸಿದರು.
ಇಲ್ಲಿನ ಸದಾಶಿವ ನಗರದಲ್ಲಿರುವ ಡಿಕೆಶಿ ಅವರ ಮನೆಗೆ ಭೇಟಿ ನೀಡಿದ ಕಾರ್ಯಾಧ್ಯಕ್ಷರು ಚೆಕ್ ಗಳನ್ನು ಹಸ್ತಾಂತರಿಸಿ ಲಾಕ್‌ಡೌನ್ ಸಂಕಷ್ಟದಲ್ಲಿರುವ ಬಡಜನರಿಗೆ ನೆರವಾಗುವ ಕುರಿತು ಚರ್ಚೆ ನಡೆಸಿದರು. ಕೊರೋನಾ ಬಗ್ಗರ ಜನರಲ್ಲಿ ಜಾಗೃತಿ ಮೂಡಿಸುವುದರ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಎಸ್.ಆರ್ ಪಾಟೀಲ, ಮಾಜಿ ಸಚಿವ ವೀರಕುಮಾರ ಪಾಟೀಲ, ಗಣ್ಯರು ಇದ್ದರು.