Breaking News

ಕಾರ್ಮಿಕರ ಉಚಿತ ಪ್ರಯಾಣಕ್ಕೆ ಕೆಪಿಸಿಸಿ ವತಿಯಿಂದ 1 ಕೋಟಿ ನೆರವು

Spread the love

ಬೆಂಗಳೂರು,ಮೇ 3- ವಲಸೆ ಕಾರ್ಮಿಕರಿಗೆ ಉಚಿತವಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಒಂದು ಕೋಟಿ ರೂ. ಚೆಕ್ ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಸದೆ ಇರುವುದರಿಂದ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲಾಗದೆ ಪರದಾಡುತ್ತಿದ್ದಾರೆ.

ಮಕ್ಕಳು, ಮಹಿಳೆಯರು, ವೃದ್ಧರು ಸೇರಿ ಅನೇಕ ಮಂದಿ ಊಟ, ತಿಂಡಿ ವ್ಯವಸ್ಥೆ ಬಸ್ ಇಲ್ಲದೆ ಬಸ್ ನಿಲ್ದಾಣದಲ್ಲಿ ಅನಾಥರಾಗಿ ಬಳಲುತ್ತಿದ್ದಾರೆ. ರಾಜಸ್ಥಾನ, ತೆಲಂಗಾಣ, ದೆಹಲಿ, ಉತ್ತರಪ್ರದೇಶ, ಮಹಾರಾಷ್ಟ್ರ, ಜಾರ್ಖಂಡ್ ಅನೇಕ ರಾಜ್ಯಗಳು ಪ್ರಯಾಣಿಕರು ತಮ್ಮ ಊರು ತಲುಪಲು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿವೆ.

ಆದರೆ ನಮ್ಮ ಸರ್ಕಾರ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿಲ್ಲ. ಪ್ರಯಾಣಿಕರ ಯೋಗಕ್ಷೇಮದ ಬಗ್ಗೆ ಚಿಂತಿಸಿಲ್ಲ. ಸರ್ಕಾರಕ್ಕೆ ತೀವ್ರ ಹಣಕಾಸಿನ ತೊಂದರೆ ಇರಬಹುದು. ಹೀಗಾಗಿ ನಮ್ಮ ಪಕ್ಷದ ಶಾಸಕರು, ಮಾಜಿ ಶಾಸಕರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಅನೇಕ ಮುಖಂಡರು ಕೊರೊನಾ ಕಾಂಗ್ರೆಸ್ ಪರಿಹಾರ ನಿಧಿಗೆ ನೀಡಿರುವ ಹಣದಲ್ಲಿ ಒಂದು ಕೋಟಿ ರೂ.ಗಳ ಚೆಕ್‍ನ್ನು ಸಾರಿಗೆ ಸಂಸ್ಥೆಗೆ ನೀಡುತ್ತಿದ್ದೇವೆ.

ಇದರಲ್ಲಿ ಪ್ರಯಾಣಿಕರನ್ನು ಉಚಿತವಾಗಿ ಊರಿಗೆ ತಲುಪಿಸುವ ವ್ಯವಸ್ಥೆ ಇನ್ನು ಅಗತ್ಯಬಿದ್ದರೆ ಹೇಳಿ ಕೆಪಿಸಿಸಿ ಭರಿಸುತ್ತದೆ. ಪ್ರಜೆಗಳ ಕ್ಷೇಮವೇ ನಮ್ಮ ಕರ್ತವ್ಯ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್!

Spread the loveಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್! ಬೆಂಗಳೂರು: ವಯೋವೃದ್ಧ ಕಾರು ಚಾಲಕರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ