Breaking News

ಕಳಪೆ ಕಾಮಗಾರಿ: ಸೇತುವೆ ಮುಳುಗಡೆಯಾಗದಿದ್ರೂ ವಾಹನ ಸಂಚಾರ ಬಂದ್

Spread the love

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮುಳುಗಡೆಯಾಗದಿದ್ದರೂ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗಿದೆ.

       ಅಚ್ಚರಿಯ ಸಂಗತಿಯೆಂದರೆ, ಭೀಮಾ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದು 2 ವರ್ಷಗಳ ಹಿಂದಷ್ಟೆ ಉದ್ಘಾಟನೆಯಾಗಿದ್ದ ಸೇತುವೆಯ ಗುಣಮಟ್ಟ ಕಳಪೆಯಾಗಿರುವ ಆರೋಪ ಕೇಳಬಂದಿದೆ.

ಹೀಗಾಗಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿಲ್ಲವೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ನಿನ್ನೆಯಿಂದಲೇ ಸೇತುವೆಯ ಮೇಲೆ ವಾಹನ ಸಂಚಾರ ಸ್ಥಗಿತವಾಗಿದ್ದ ಹಿನ್ನೆಲೆಯಲ್ಲಿ ಕಲಬುರಗಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

ಅಂದ ಹಾಗೆ, ಸೇತುವೆಯನ್ನು L&T ಕಂಪನಿ ಕಡೆಯಿಂದ ಬಂದ್ ಮಾಡಲಾಗಿದೆ ಎಂದು ಹೇಳಲಾಗಿದೆ. ಮುಂಜಾಗ್ರತಾ ಕ್ರಮದಿಂದ ವಾಹನ ಸಂಚಾರ ಸ್ಥಗಿತ ಮಾಡಿದ್ದೇವೆ. ಎಂದು ಈ ಕುರಿತು L&Tಯಿಂದ ಮಾಹಿತಿ ಸಿಕ್ಕಿದೆ. ಇದರಿಂದ ವಾಹನ ಸವಾರರು ಎರಡು ದಿನಗಳಿಂದ ಪರದಾಡುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಇಲ್ಲೇ ಸಿಕ್ಕಿಕೊಂಡಿದ್ದೇವೆ. ತಿನ್ನೋಕೆ ಊಟವಿಲ್ಲ. ಕುಡಿಯೋಕೆ ನೀರಿನ ವ್ಯವಸ್ಥೆಯಿಲ್ಲ ಎಂದು ಲಾರಿ ಚಾಲಕನೊಬ್ಬ ತನ್ನ ಅಳಲು ತೋಡಿಕೊಂಡಿದ್ದಾನೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ