Breaking News

ಕೆಪಿಎಸ್‌ಸಿ ನೇಮಕಾತಿ ಹಗರಣ – ಇಡಿಯಿಂದ ವಿಧಾನಸೌಧ ಪೊಲೀಸರಿಗೆ ದೂರು

Spread the love

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ  ವಿಧಾನಸೌಧ ಪೊಲೀಸರಿಗೆ ದೂರು ನೀಡಿದೆ.

ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೂ ಇಡಿ ದೂರು ನೀಡಿದೆ. ಹೈಕೋರ್ಟ್ ಆದೇಶದ ಮೇರೆಗೆ ಇಡಿ ಈ ದೂರು ಸಲ್ಲಿಸಿದೆ. ಪಿಎಂಎಲ್‌ಎ ಕಾಯ್ದೆಯ ಸೆಕ್ಷನ್ 66(2) ಅಡಿಯಲ್ಲಿ ದೂರು ದಾಖಲಿಸಲು ಹೈಕೋರ್ಟ್ ಸೂಚಿಸಿತ್ತು.

ಇಡಿ ನೀಡಿರುವ ದೂರನ್ನು ಸ್ವೀಕರಿಸಿರುವ ವಿಧಾನಸೌಧ ಪೊಲೀಸರು, ಮುಂದಿನ ಕ್ರಮ ಕೈಗೊಳ್ಳುವ ಮೊದಲು ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ. ಈ ಸಂಬಂಧ ಅಡ್ವೊಕೇಟ್ ಜನರಲ್ ಕಚೇರಿಗೆ ದೂರನ್ನು ಕಳುಹಿಸಿ ಸಲಹೆ ಪಡೆಯಲು ನಿರ್ಧರಿಸಿದ್ದಾರೆ.

ಈಗಾಗಲೇ ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಇಡಿ ಆರೋಪ ಮಾಡಿದೆ. ಹೀಗಾಗಿ ಎಫ್‌ಐಆರ್ ದಾಖಲಿಸುವ ವಿಚಾರದಲ್ಲಿ ಪೊಲೀಸರು ತರಾತುರಿ ಮಾಡದೆ ಕಾನೂನು ಸಲಹೆ ಪಡೆಯುತ್ತಿದ್ದಾರೆ.

ಕೆಪಿಎಸ್‌ಸಿ ಪರೀಕ್ಷೆ ವಿಚಾರದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಆರೋಪ ಮಾಡಲಾಗಿತ್ತು. ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಾದರೆ ಇಡಿ ತನಿಖೆ ಆರಂಭಿಸಲಿದೆ. ಸದ್ಯ ಎಫ್‌ಐಆರ್ ದಾಖಲಾಗುವುದನ್ನೇ ಇಡಿ ಕಾಯುತ್ತಿದೆ.


Spread the love

About Laxminews 24x7

Check Also

ಹೃದಯಾಘಾತಕ್ಕೆ LLB ವಿದ್ಯಾರ್ಥಿ ಬಲಿ

Spread the loveಧಾರವಾಡ: ಹೃದಯಾಘಾತದಿಂದ  ಎಲ್‌ಎಲ್‌ಬಿ ಓದುತ್ತಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ  ನಡೆದಿದೆ. ಸಮರ್ಥ್ ದೇಶಪಾಂಡೆ (22) ಮೃತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ