ಮುಖ್ಯ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನದ ಅಂಕಗಳನ್ನು ತಿರುಚುವ ಮೂಲಕ 2015 ನೇ ಸಾಲಿನ 428 ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ವ್ಯಾಪಕ ಅಕ್ರಮ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು,ಈಗಾಗಲೇ 262 ಅಭ್ಯರ್ಥಿಗಳು ಕೆಪಿಎಸ್ ಸಿ ಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.ಹಾಗೂ ಪಟ್ಟಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು 100 ಕ್ಕೂ ಹೆಚ್ಚು ಅಭ್ಯರ್ಥಿಗಳು ಸಿದ್ದತೆ ನಡೆಸಿದ್ದಾರೆಂದು ತಿಳಿದುಬಂದಿದೆ.ಇನ್ನು ಮುಖ್ಯ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನ ಪಾರದರ್ಶಕವಾಗಿ ನಡೆದಿಲ್ಲ ಎಂದು ನೊಂದ ಅಭ್ಯರ್ಥಿಗಳು ದೂರಿದ್ದರೆ ಅಂತಿಮ ಆಯ್ಕೆ ಪಟ್ಟಿಯನ್ನು ತರಾತುರಿಯಲ್ಲಿ ಪ್ರಕಟಿಸಲು ಕೆಪಿಎಸ್ ಸಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ.ಈ ಸಂಭಂದ ಸೂಕ್ತ ಕ್ರಮ ಕೈಗೊಂಡು ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನಕ್ಕೆ ಆಗ್ರಹಿಸಿ ಕೆಲ ಅಭ್ಯರ್ಥಿಗಳು ಕಾಂಗ್ರೇಸ್ ನಾಯಕ ಸಿದ್ದರಾಮಯ್ಯ ಅವರಿಗೆ ಅಹವಾಲು ಸಲ್ಲಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಹಾಗೂ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೂ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆಂದು ಪ್ರಜಾವಾಣಿ ಪತ್ರಿಕೆಯಿಂದ ತಿಳಿದುಬಂದಿದೆ.ಇನ್ನು ಕೆ.ಎ.ಎಸ್ ಹುದ್ದೆಗಳ ನೇಮಕದಲ್ಲಿ ಆಕ್ರಮ ನಡೆದಿದ್ದು ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನಲ್ಲಿ ಆಗ್ರಹಿಸಿದೆ.ಅಲ್ಲದೆ ಒಂದೆರಡು ಸಮುದಾಯಗಳಿಗೆ 150 ಅಭ್ಯರ್ಥಿಗಳು ಆಯ್ಕೆಯಾಗಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅರ್ಹ ಹಾಗೂ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದೆ.ಶೋಷಿತ ವರ್ಗಗಳಿಗೆ ಮೀಸಲಾತಿಯಷ್ಟೇ ಹುದ್ದೆಗಳಿಗೆ ಮಾತ್ರ ಆಯ್ಕೆಯಾಗಿರುವುದು ಸಂಶಯ ಹುಟ್ಟುಹಾಕಿದ್ದು, ಕೂಡಲೇ ಸರ್ಕಾರ ಮೌಲ್ಯಮಾಪನದಲ್ಲಿ ನಡೆದಿರುವ ಬಗ್ಗೆ ತನಿಖೆ ನಡೆಸಬೇಕು. ಮರುಮೌಲ್ಯಮಾಪನ ಮಾಡಿ ಶೋಷಿತವರ್ಗದ ಪ್ರತಿಭಾವಂತರಿಗೆ ನ್ಯಾಯಕೊಡಿಸಬೇಕು ಎಂದು ವೇದಿಕೆ ಒತ್ತಾಯಿಸಿದೆ.ಆದ್ದರಿಂದ ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಹೊರಗುಳಿದ ಬೆಳಗಾವಿ ಜಿಲ್ಲೆಯಲ್ಲಿರುವ ನೊಂದ ಪ್ರತಿಭಾವಂತ ಅಭ್ಯರ್ಥಿಗಳಿಗೂ ನ್ಯಾಯ ದೊರಕಿಸಿಕೊಡಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಉದ್ದೇಶದಿಂದ ಜ.9 ರಂದು ಬೆಳಗಾವಿ ನಗರದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.ನೊಂದ ಅಭ್ಯರ್ಥಿಗಳು ಈ ಪೂರ್ವಭಾವಿ ಸಭೆಗೆ ಆಗಮಿಸಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಬೇಕೆಂದು All India human Rights ಸಂಘಟನೆ ಮನವಿ ಮಾಡಿಕೊಂಡಿದೆ.ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿ: ಮೊ.,+919686616555
