ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯಬೇಕಿದ್ದ ವಿವಿಧ ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.
ಕೊರೊನಾ ಅವಾಂತರದಿಂದಾಗಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಮೇ, ಜೂನ್ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಾಲ್ಕು ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಲಾಕ್‍ಡೌನ್ ಮುಗಿದ ಬಳಿಕ ಪರೀಕ್ಷಾ ದಿನಾಂಕ ನಿಗದಿ ಮಾಡುವುದಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ ಹೊರಡಿಸಲಾದ ಪ್ರಕಟಣೆಯಲ್ಲಿ ತಿಳಿಸಿದಲಾಗಿದೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಹೀಗಾಗಿ ಅನಗತ್ಯವಾಗಿ ಸಂಚರಿಸುವುದನ್ನು ನಿಷೇಧಿಸಲಾಗಿದೆ.
ಇವತ್ತು ಒಂದೇ ದಿನ 29 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 474ಕ್ಕೇರಿದೆ. ಸಿಲಿಕಾನ್ ಸಿಟಿಗೆ ಇವತ್ತು ಬ್ಲ್ಯಾಕ್ ಫ್ರೈಡೇ ಆಗಿದ್ದು, 19 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇಂದು ಬೆಳಗ್ಗೆ 11 ಮತ್ತು ಸಂಜೆ ಬುಲೆಟಿನ್ ನಲ್ಲಿ ಒಟ್ಟು 19 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು ಬೆಂಗಳೂರಿನ 19 ಜನರು ಸೇರಿದಂತೆ ರಾಜ್ಯದ 29 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆ ಕಂಡಿದೆ.