ಮೈಸೂರು, ಜ.19-ಸಚಿವಾಕಾಂಕ್ಷಿಗಳ ಋಣ ನನ್ನ ಮೇಲಿದೆ. ಅದನ್ನು ತೀರಿಸುವುದು ನನ್ನ ಕರ್ತವ್ಯ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ನಗರದ ಸರ್ಕಾರಿ ವಸತಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವಾಕಾಂಕ್ಷಿಗಳಿಂದ ಇಂದು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅವರನ್ನು ಸಚಿವರನ್ನಾಗಿ ಮಾಡುವುದು ನಮ್ಮ ಕರ್ತವ್ಯ. ಅದನ್ನು ಮುಂದಿನ ದಿನಗಳಲ್ಲಿ ನಿರ್ವಹಿಸುತ್ತೇನೆ ಎಂದರು.
ಸಚಿವ ಸ್ಥಾನದ ಆಕಾಂಕ್ಷಿಗಳ ಬಗ್ಗೆ ಬಿಜೆಪಿ ನಾಯಕರ ಟೀಕೆ ವಿಚಾರವಾಗಿ ಕೇಳಿ ಪ್ರಶ್ನೆಗೆ ಟೀಕೆ ಮಾಡುತ್ತಿರುವವರು ಬಾಯಿ ಮುಚ್ಚಿಕೊಂಡಿರಬೇಕು. ಅವರುಗಳ ವಿರುದ್ಧ ಹಗುರವಾಗಿ ಮಾತನಾಡುವುದು ಸರಿಯಲ್ಲ. ಅವರಿಂದಲೇ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ.ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ, ಕುಮಾರಸ್ವಾಮಿ ಸಿನಿಮಾ ನೋಡಿಕೊಂಡಿರುವುದು ಒಳ್ಳೆಯದು ಎಂದು ತಿಳಿಸಿದರು.
ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದವರು. ಅಧಿಕಾರದಿಂದ ದೂರ ಉಳಿದ ಮೇಲೆ ಬೇರೆ ಕೆಲಸ ಏನಿದೆ ಅವರಿಗೆ. ಭಾಷೆ ಮೇಲೆ ಹಿಡಿತ ಇರಬೇಕು ಎಂದು ಹೇಳಿದರು.
ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ದೇಶಾದ್ಯಂತ ಜಾಗೃತಿ ಮೂಡಿಸುತ್ತಿದ್ದಾರೆ. ಅಂತಹವರ ವಿರುದ್ಧ ಕುಮಾರಸ್ವಾಮಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದರು.
ಎಸ್‍ಡಿಪಿಐ, ಪಿಎಫ್‍ಐ ಭಯೋತ್ಪಾದನಾ ಸಂಘಟನೆಗೆ ಅದರ ಚಟುವಟಿಕೆ ಏನು ಎಂಬುದು ಮೈಸೂರು, ಶಿವಮೊಗ್ಗದವರಿಗೆ ಅನುಭವವಾಗಿದೆ. ಕೇರಳದಿಂದ ಬಂದು ಪಾಕಿಸ್ತಾನಕ್ಕೆ ಜೈ ಎಂದು ಕೂಗಿದ್ದನ್ನು ನೋಡಿದ್ದೇವೆ. ಕೊಲೆ ಮಾಡಿದ ಪ್ರಕರಣಗಳೂ ನಮ್ಮ ಮುಂದಿದೆ. ಹಾಗಾಗಿ ಈ ಎಲ್ಲಾ ಕಾರಣ ಮುಂದಿಟ್ಟು ಈ ಸಂಘಟನೆಗಳನ್ನು ನಿಷೇಧಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.