Breaking News

ಮುಷ್ಕರ ನಡುವೆಯೂ ಸಾರಿಗೆ ನಿಗಮಗಳ ಬಸ್‌‍ ಸೇವೆ ಯಥಾಸ್ಥಿತಿ

Spread the love

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಬೆಂಗಳೂರು ಚಲೋ ಮುಷ್ಕರ ನಡೆಸುವ ಕರೆಯ ನಡುವೆಯೂ ಬಸ್‌‍ ಸೇವೆ ಯಥಾಸ್ಥಿತಿಯಲ್ಲಿದೆ. ಇಂದು ಬೆಳಿಗ್ಗೆ ಕೆಎಸ್‌‍ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಬಸ್‌‍ ಸಂಚಾರ ಎಂದಿನಂತೆ ಮುಂದುವರೆದಿದ್ದು, ಯಾವುದೇ ವ್ಯತ್ಯಯವಾಗಿಲ್ಲ ಎಂದು ಕೆಎಸ್‌‍ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ನೇತೃತ್ವದಲ್ಲಿ ಬೆಂಗಳೂರು ಚಲೋ ಮುಷ್ಕರ ನಡೆಸುವುದಾಗಿ ತಿಳಿಸಲಾಗಿತ್ತು. ಇಂದು ಬೆಳಿಗ್ಗೆಯಿಂದ ಬಸ್‌‍ ಸೇವೆಯಲ್ಲಿ ಯಾವುದೇ ಅಡಚಣೆಯಾಗಿಲ್ಲ ಎಂದು ಬಿಎಂಟಿಸಿ ಸ್ಪಷ್ಟಪಡಿಸಿದೆ. ಆದರೆ, ಸಂಜೆಯ ನಂತರ ಯಾವ ಸ್ವರೂಪ ಪಡೆಯಬಹುದು ಎಂಬುದನ್ನು ಕಾದು ನೋಡಬೇಕಿದೆ.

ಇಂದು ಬೆಳಿಗ್ಗೆ 9 ಗಂಟೆ ವೇಳೆಗೆ ಕೆಎಸ್‌‍ಆರ್‌ಟಿಸಿಯ ಎಲ್ಲಾ ಮಾರ್ಗಗಳಲ್ಲಿ ಶೇ.91.36ರಷ್ಟು ಬಸ್‌‍ ಸೇವೆ ಆರಂಭಿಸಲಾಗಿದ್ದು, ಜೊತೆಗೆ, 591 ಜಾತ್ರಾ ವಿಶೇಷ ಬಸ್‌‍ ಸೇವೆ ಒದಗಿಸಲಾಗಿದೆ. ಬಿಎಂಟಿಸಿಯ ಶೇ.99.82 ರಷ್ಟು ಬಸ್‌‍ ಸೇವೆ ಒದಗಿಸಲಾಗಿದ್ದು, ಯಾವುದೇ ವ್ಯತ್ಯಯವಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ವಾಯವ್ಯ ಸಾರಿಗೆ ನಿಗಮದಲ್ಲಿ ಶೇ.97.77ರಷ್ಟು ಹಾಗೂ ಕೆಕೆಆರ್‌ಟಿಸಿಯಲ್ಲಿ ಶೇ.98.14 ರಷ್ಟು ಬಸ್‌‍ ಸೇವೆ ಆರಂಭವಾಗಿದ್ದು, ಒಟ್ಟಾರೆ ನಾಲ್ಕು ನಿಗಮಗಳಿಂದ ಶೇ.96.25 ರಷ್ಟು ಬಸ್‌‍ ಸೇವೆ ಒದಗಿಸಲಾಗಿದ್ದು, ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ ಎಂದು ಕೆಎಸ್‌‍ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ಬೆಂಗಳೂರು, ಫೆ.19-ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಬೆಂಗಳೂರು ಚಲೋ ಮುಷ್ಕರ ನಡೆಸುವ ಕರೆಯ ನಡುವೆಯೂ ಬಸ್‌‍ ಸೇವೆ ಯಥಾಸ್ಥಿತಿಯಲ್ಲಿದೆ. ಇಂದು ಬೆಳಿಗ್ಗೆ ಕೆಎಸ್‌‍ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಬಸ್‌‍ ಸಂಚಾರ ಎಂದಿನಂತೆ ಮುಂದುವರೆದಿದ್ದು, ಯಾವುದೇ ವ್ಯತ್ಯಯವಾಗಿಲ್ಲ ಎಂದು ಕೆಎಸ್‌‍ಆರ್‌ಟಿಸಿ ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ಸರ್ಕಾರದ ಹೇಡಿತನಕ್ಕೆ ಸಾಕ್ಷಿ: ಜೆಡಿಎಸ್

Spread the loveಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಮಾಡಿರೋ ಸರ್ಕಾರದ ನಡೆಯನ್ನ ಜೆಡಿಎಸ್ ಖಂಡಿಸಿದೆ. ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರೋ ಜೆಡಿಎಸ್, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ