Home / ಜಿಲ್ಲೆ / ಕನ್ನಡ ಧ್ವಜದ ಬಗ್ಗೆ ಪ್ರಶ್ನಿಸಲು ನಾಡದ್ರೋಹಿ, ಎಂಇಎಸ್-ಶಿವಸೇನೆ ಯಾವೂರ ದೊಣ್ಣೆ ನಾಯಕರು..ಮಾಜಿ ಸಿಎಂ ಎಚ್‍ಡಿಕೆ ಗರಂ..!

ಕನ್ನಡ ಧ್ವಜದ ಬಗ್ಗೆ ಪ್ರಶ್ನಿಸಲು ನಾಡದ್ರೋಹಿ, ಎಂಇಎಸ್-ಶಿವಸೇನೆ ಯಾವೂರ ದೊಣ್ಣೆ ನಾಯಕರು..ಮಾಜಿ ಸಿಎಂ ಎಚ್‍ಡಿಕೆ ಗರಂ..!

Spread the love

ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು.

ಸರಣಿ ಟ್ವೀಟ್ ಮೂಲಕ ನಾಡದ್ರೋಹಿಗಳ ವಿರುದ್ಧ ಗರಂ ಆಗಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ನೆಲ, ನಮ್ಮ ಭಾಷಾ , ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು? ಇವರ ಬಾಧೆಯಾದರೂ ಏನು? ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ಜಜ ತೆರವಿಗಾಗಿ ಎಂಇಎಸ್, ಶಿವಸೇನೆ ಇಷ್ಟು ಕುತಂತ್ರ ಮಾಡುತ್ತಿದ್ದರೂ, ಬಿಜೆಪಿ ಸರ್ಕಾರದ ಯಾವೊಬ್ಬ ಪ್ರತಿನಿಧಿಯಾಗಲಿ, ಕಾಂಗ್ರೆಸ್‍ನ ಯಾವ ನಾಯಕರಾಗಲಿ ಪ್ರತಿಕ್ರಿಯಿಸಿದ್ದನ್ನು ನಾನು ನೋಡಲಿಲ್ಲ. ಇದೇ ಸಲುಗೆಯಲ್ಲೇ ಉದ್ಧವ ಠಾಕ್ರೆ ಬೆಳಗಾವಿಯಂಥ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಮಾತಾಡಿದ್ದು.

ಈ ಧ್ವಜ ವಿರೋಧಿ ಹೋರಾಟವನ್ನು ರಾಜ್ಯದ ಪ್ರತಿಯೊಬ್ಬರೂ ಪಕ್ಷಾತೀತವಾಗಿ ವಿರೋಧಿಸಬೇಕಾಗಿದೆ. ಕನ್ನಡದ ವಿಚಾರಕ್ಕೆ ಮಾತಾಡಲು,ಕನ್ನಡಕ್ಕೆ ಕೈ ಎತ್ತಲು ರಾಜ್ಯದ ನಾಯಕರು ರಾಜಕೀಯ ಮರೆಯಬೇಕು. ಪಕ್ಷ ನೋಡಬಾರದು, ಮಿತ್ರಪಕ್ಷವೆಂದು ಎಣಿಸಬಾರದು, ದೆಹಲಿ ಕಡೆಗೆ ನೋಡಬಾರದು. ಆಗ ಮಾತ್ರ ಇಂಥ ಆಕ್ರಮಣಕಾರಿ ಪ್ರವೃತ್ತಿಗಳನ್ನು ನಾವು ಹತ್ತಿಕ್ಕಲು ಸಾಧ್ಯ.

ಬೆಳಗಾವಿಯಲ್ಲಿ ಇಂದು ಕನ್ನಡ ಧ್ವಜ ವಿರೋಧಿಸಿ ಎಂಇಎಸ್, ಶಿವಸೇನೆ ನಡೆಸುವ ಪ್ರತಿಭಟನೆಯನ್ನು ಸಮಾಜವಿದ್ರೋಹಿ, ದೇಶದ್ರೋಹಿ, ಘಾತಕ ಕೃತ್ಯವೆಂದು ಹೇಳಲು ಅಡ್ಡಿಯಿಲ್ಲ. ದೇಶದ ಸಾಮರಸ್ಯಕ್ಕೆ, ಭಾಷಾ ಸೌಹಾರ್ದತೆಗೆ ಈ ಹೋರಾಟ ವಿಷ ಹಿಂಡಲಿದೆ ಎಂಬುದರಲ್ಲಿ ಎರಡು ಮಾತೂ ಇಲ್ಲ. ಇದರ ಹಿಂದೆ ಮಹಾರಾಷ್ಟ್ರ ಇದೆ ಎಂಬುದಕ್ಕೆ ಸಾಕ್ಷಿಯೂ ಬೇಕಿಲ್ಲ ಎಂದಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576*
*Laxmi News*

 


Spread the love

About Laxminews 24x7

Check Also

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Spread the love ಬೆಂಗಳೂರು: ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ