Breaking News
Home / ಜಿಲ್ಲೆ / ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್‍ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನೆರವೇರಿತು.

ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್‍ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನೆರವೇರಿತು.

Spread the love

ಬೆಂಗಳೂರು, ಫೆ.10-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್‍ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನೆರವೇರಿತು.

ಮಾಜಿ ಸಚಿವ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್‍ಕುಮಾರಸ್ವಾಮಿ ವಿವಾಹದ ನಿಶ್ಚಿತಾರ್ಥವು ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಸಮ್ಮುಖದಲ್ಲಿ ನೆರವೇರಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು ನಿಶ್ಚಿತಾರ್ಥದಲ್ಲಿ ಭಾಗವಹಿಸಿದ್ದರು.

 

ವಿವಿಧ ಪಕ್ಷಗಳ ರಾಜಕೀಯ ನಾಯಕರು, ಮುಖಂಡರು, ಚಲನಚಿತ್ರರಂಗದ ಗಣ್ಯರು, ಉಭಯ ಕುಟುಂಬಗಳ ಬಂಧುಗಳು, ಹಿತೈಷಿಗಳು ನಿಶ್ಚಿತಾರ್ಥಕ್ಕೆ ಆಗಮಿಸಿ ನಿಖಿಲ್ ಹಾಗೂ ರೇವತಿ ಅವರಿಗೆ ಶುಭ ಹಾರೈಸಿದರು. ಖಾಸಗಿ ಹೊಟೇಲ್‍ನಲ್ಲಿ ವಿಶೇಷವಾಗಿ ಅಲಂಕರಿಸಿದ್ದ ವೇದಿಕೆಯಲ್ಲಿ ನಿಶ್ಚಿತಾರ್ಥ ನಡೆಯಿತು. ಇಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿ ಶುಭ ಕೋರಿದರು.

ರಾಮನಗರ-ಚನ್ನಪಟ್ಟಣ ನಡುವೆ ನಿಖಿಲ್‍ಕುಮಾರಸ್ವಾಮಿಯ ಮದುವೆಯನ್ನು ಅದ್ಧೂರಿಯಾಗಿ ನಡೆಸಲು ಎಚ್.ಡಿ.ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ಜನರಿಗೆ ನಿಶ್ಚಿತಾರ್ಥದ ಬಳಿಕ ಮದುವೆ ಸಿದ್ಧತೆ ಕಾರ್ಯವನ್ನು ಕೈಗೊಳ್ಳಲಿದ್ದಾರೆ.


Spread the love

About Laxminews 24x7

Check Also

ಸುವರ್ಣಸೌಧದಲ್ಲಿ‌ ಸ್ಪೀಕರ್, ಸಭಾಪತಿಗಳು ಹಸಿರೀಕರಣಕ್ಕೆ ಪಣ ತೊಟ್ಟಿದ್ದಾರೆ

Spread the loveಬೆಳಗಾವಿ: ಸುವರ್ಣಸೌಧದಲ್ಲಿ ಪರಿಸರ ಕಾಳಜಿ ಮೆರೆಯುವ ನಿಟ್ಟಿನಲ್ಲಿ ಸ್ಪೀಕರ್ ಯು ಟಿ ಖಾದರ್ ಚಳಿಗಾಲದ‌ ಅಧಿವೇಶನದಲ್ಲಿ ವಿನೂತನ ಪ್ರಯೋಗವೊಂದನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ