Breaking News

ಕೇಂದ್ರ ಸಚಿವ ಸ್ಥಾನಕ್ಕೆ ಎಲ್.ಮುರುಗನ್ ರಾಜೀನಾಮೆ

Spread the love

ನವದೆಹಲಿ: ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಸ್ಥಾನಕ್ಕೆ ಎಲ್.ಮುರುಗನ್  ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ರಾಜ್ಯಸಭಾ ಸದಸ್ಯತ್ವವನ್ನೂ ತೊರೆದಿದ್ದಾರೆ.

ತಮಿಳುನಾಡಿನಲ್ಲಿ ತಳಮಟ್ಟದಿಂದ ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ಪೂರ್ಣಾವಧಿಯಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ, ರಾಜ್ಯ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಸ್ಥಾನಗಳಿಂದ ತಮ್ಮನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಅವರು ಮನವಿ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

‘ಎಕ್ಸ್’ (X) ನಲ್ಲಿನ ಪೋಸ್ಟ್ ಒಂದರಲ್ಲಿ ಮುರುಗನ್ ಅವರು ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಗೌರವಾನ್ವಿತ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಾರತ ಮಾತೆ ಮತ್ತು ತಮಿಳುನಾಡಿಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಅತ್ಯಂತ ದೊಡ್ಡ ಗೌರವವಾಗಿದೆ ಎಂದು ಆ ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

ಈಗ ನಾನು ತಳಮಟ್ಟಕ್ಕೆ ಮರಳಿ ನಮ್ಮ ಕಾರ್ಯಕರ್ತರೊಂದಿಗೆ ನಿಂತು 2029ರ ಲೋಕಸಭಾ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಪಡಿಸಲು ಪೂರ್ಣಾವಧಿಯಾಗಿ ತೊಡಗಿಸಿಕೊಳ್ಳಲು ಬಯಸುತ್ತೇನೆ. ಮೊದಲು ರಾಷ್ಟ್ರ, ನಂತರ ಪಕ್ಷ, ಕೊನೆಯಲ್ಲಿ ಸ್ವಯಂ ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕೇಂದ್ರದಲ್ಲಿ ಸಂಪುಟ ಪುನಾರಚನೆಯ ಕುರಿತಾದ ಚರ್ಚೆಗಳ ನಡುವೆಯೇ ಮುರುಗನ್ ಅವರ ಈ ನಡೆ ಅಚ್ಚರಿ ಮೂಡಿಸಿದೆ. ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ ಹಲವು ರಾಜ್ಯಸಭಾ ಸಂಸದರು ಮತ್ತು ಸಚಿವರಿಗೆ ಮರುನಾಮನಿರ್ದೇಶನ ಸಿಗದಿದ್ದರಿಂದ ಈ ಊಹಾಪೋಹಗಳು ಹುಟ್ಟಿಕೊಂಡಿದ್ದವು.


Spread the love

About Laxminews 24x7

Check Also

ಸೌಜನ್ಯ ಪ್ರಕರಣದಲ್ಲಿ ತಂದೆ, ತಾಯಿ ಹಣ ಮಾಡಿಕೊಂಡಿದ್ದಾರೆ – ವಕೀಲ ಅಮೃತೇಶ್ ಗಂಭೀರ ಆರೋಪ

Spread the loveಬೆಂಗಳೂರು: ಸೌಜನ್ಯ ಪ್ರಕರಣದಲ್ಲಿ ಆಕೆಯ ತಂದೆ, ತಾಯಿ ಹಣ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್  ವಕೀಲ ಅಮೃತೇಶ್ ಗಂಭೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ