Breaking News

ಮಹಿಳೆಯರ ಬ್ಯಾಡ್ಮಿಂಟನ್ ವಿಭಾಗದಲ್ಲಿ ಕವಿತ ಎ.ಎಸ್. ಅವರಿಗೆ ಚಿನ್ನದ ಪದಕ

Spread the love

ಮಹಿಳೆಯರ ಬ್ಯಾಡ್ಮಿಂಟನ್ ವಿಭಾಗದಲ್ಲಿ ಕವಿತ ಎ.ಎಸ್. ಅವರಿಗೆ ಚಿನ್ನದ ಪದಕ

ಧಾರವಾಡ (ಕರ್ನಾಟಕ ವಾರ್ತೆ) ಜ.೦೫: ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಮಟ್ಟದಲ್ಲಿ ಜರುಗಿದ ಕ್ರೀಡಾಕೂಟದ ಕಬಡ್ಡಿ ಪಂದ್ಯಾವಳಿಯಲ್ಲಿ ಹುಬ್ಬಳ್ಳಿಯ ಡಿ.ಎಫ್. ಇರಗಾರ ತಂಡದವರು ಪ್ರಥಮ ಸ್ಥಾನ, ಪ್ರಶಸ್ತಿ ಪಡೆದುಕೊಂಡರು.


೪೦ ವರ್ಷ ಮೇಲ್ಪಟ್ಟ ಮಹಿಳೆಯರ ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯೆ ಕವಿತ ಎ.ಎಸ್. ಅವರು ಡಬಲ್ಸ್ನಲ್ಲಿ ಚಿನ್ನದ ಪದಕ ಹಾಗೂ ಸಿಂಗಲ್ಸ್ನಲ್ಲಿ ಬೆಳ್ಳಿ ಪದಕ ಪಡೆದರು.
ಕರಕುಶಲ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಶಿಕ್ಷಣ ಇಲಾಖೆಯ ಲತಾದೇವಿ ಬ.ಬೆನಕನಹಳ್ಳಿ ಪ್ರಥಮ ಸ್ಥಾನ ಪಡೆದರು. ಜಾನಪದ ನೃತ್ಯ ಸ್ಪರ್ಧೆಯಲ್ಲಿ ಧಾರವಾಡ ತಾಲೂಕಿನ ಕಂದಾಯ ಇಲಾಖೆ ಅಧಿಕಾರಿಗಳ ತಂಡ ಬಹುಮಾನ ಗಳಿಸಿತು


Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶ

Spread the loveಬೆಳಗಾವಿ: ಮಹಾನಗರ ಪಾಲಿಕೆಯ ತಿನಿಸು ಕಟ್ಟೆ ಮಳಿಗೆಗಳನ್ನು ತಮ್ಮ ಪತ್ನಿಯರ ಹೆಸರಿನಲ್ಲಿ ಪಡೆದ ಪ್ರಕರಣದಡಿ ಪಾಲಿಕೆಯ ಇಬ್ಬರು ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ