Breaking News
Home / new delhi / ಪ್ರಥಮ ಪ್ರಾಶಸ್ತ್ಯದ ಮತ ನೀಡಿ:ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ!!

ಪ್ರಥಮ ಪ್ರಾಶಸ್ತ್ಯದ ಮತ ನೀಡಿ:ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ!!

Spread the love

 

 

 

ಬೈಲಹೊಂಗಲ: ಬೆಂಗಳೂರಿನಿಂದ ಬಂದು ಇಲ್ಲಿ ಬಂದು ಮಾತನಾಡುವವರ ಮಾತು ಬೆಳಗಾವಿಯಲ್ಲಿ ಏನೂ ನಡೆಯುವುದಿಲ್ಲ ಎಂದು ವಿಧಾನ ಪರಿಷತ್ತಿನ ಬೆಳಗಾವಿ ದ್ವಿಸದಸ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು.

ಅವರು ಪಟ್ಟಣದ ಮುರಗೊಡ ರಸ್ತೆಯ ಪೃಥ್ವಿ ಗಾರ್ಡನ್‌ನಲ್ಲಿ ಮಂಗಳವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಪ್ರಚಂಡ ಬಹುಮತದಿಂದ ಆಯ್ಕೆ ಮಾಡಬೇಕೆಂದು ಕೋರಿದರು.

ನನ್ನನ್ನು ಆಯ್ಕೆ ಮಾಡಿ ವಿಧಾನ ಪರಿಷತ್‌ಗೆ ಕಳುಹಿಸಿದರೆ ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸಿ ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ಸದಾ ಶ್ರಮಿಸುವುದಾಗಿ ಭರವಸೆ ನೀಡಿದರು.

ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದು ಮತದಾರರು ನನ್ನ ಮೇಲೆ ವಿಶ್ವಾಸವಿಟ್ಟು ಪ್ರಚಾರ ಸಭೆಯಲ್ಲಿ ಸಾವಿರಾರು ಮತದಾರರು ಪಾಲ್ಗೊಂಡು ನನಗೆ ಪ್ರೇರಣೆ ನೀಡುತ್ತಿದ್ದಾರೆ. ಈ ವಿಶ್ವಾಸ ಚುನಾವಣೆ ನಡೆಯುವ ದಿನದಂದು ನನಗೆ ಪ್ರಥಮ ಪ್ರಾಶಸ್ತ್ಯ ಮತ ನೀಡಿ ಆಶಿರ್ವದಿಸಬೇಕೆಂದು ಮನವಿ ಮಾಡಿದರು. ಚುನಾಯಿತ ಸದಸ್ಯರು ತಮ್ಮ ಗ್ರಾಮದ ಸಮಸ್ಯೆ ಕುರಿತು ನನ್ನನ್ನು ಖುದ್ದಾಗಿ ಭೇಟಿಯಾಗಿ ಚರ್ಚೆ ಮಾಡಬಹುದು. ಈ ನಿಟ್ಟಿನಲ್ಲಿ ನನ್ನ ಮನೆ ಬಾಗಿಲು ಸದಾ ತೆರೆದಿರುತ್ತದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಕೆಲಸಗಳನ್ನು ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದ ಅವರು, ಗ್ರಾಮಗಳ ಅಭಿವೃದ್ಧಿಗೆ ನನ್ನ ಸಂಕಲ್ಪವಾಗಿದೆ. ಹೀಗಾಗಿ ತಾವೆಲ್ಲರೂ ಅಭಿವೃದ್ಧಿಗಾಗಿ ಮತ ಹಾಕಬೇಕು ಎದು ಅವರು ಹೇಳಿದರು.

ಪ್ರಥಮ ಪ್ರಾಶಸ್ತ್ಯದ ಮತ ನೀಡಿ:

ಮತದಾರರು ಪ್ರಬುದ್ಧರಾಗಿದ್ದು ಅವರು ಪ್ರಥಮ ಪ್ರಾಶಸ್ತ್ಯದ ಮತ ನೀಡಲಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರ ಆಶೀರ್ವಾದವಿದೆ. ಜನರು ಕೂಡ ಯಾರು ಅಭಿವೃದ್ಧಿ ಮಾಡಲಿದ್ದಾರೆ ಎಂದು ತಿಳಿದಿದೆ. ಹೀಗಾಗಿ ತಾವು ಕೂಡ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಕೆಲಸ ಮಾಡುತ್ತೇನೆ ಎಂದು ಇದೆ ವೇಳೆ ಹೇಳಿದರು.

ಈ ಸಂದರ್ಭದಲ್ಲಿ ಜಿಪಂ.ಮಾಜಿ ಉಪಾಧ್ಯಕ್ಷ ಪಿ.ಆರ.ಕಾಗಲ, ಮತಕ್ಷೇತ್ರದ ಎಲ್ಲ ಗ್ರಾಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪುರಸಭೆಯ ಸದಸ್ಯರು ಹಾಗೂ ಅಭಿಮಾನಿ ಬಳಗ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Spread the love ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ