ಯಮಕನಮರ್ಡಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ ಲಖನ್ ಜಾರಕಿಹೊಳಿ..!!
ಯಮಕನಮರ್ಡಿಯಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭ/ರಸ್ತೆ,ಕುಡಿಯುವ ನೀರಿನ ಕಾಮಗಾರಿಗಳಿಗೆ ಚಾಲನೆ/ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ನೀಡಿದ್ರು ಚಾಲನೆ.
ಗುರುವಾರ ದಂದು ಯಮಕನಮರರ್ಡಿ ಕ್ಷೇತ್ರದಲ್ಲಿ ಬರುವ ಹೊಸ ವಂಟಮೂರಿ, ಬೂತ್ರಾಮನಹಟ್ಟಿ, ಗುಗ್ರಾನಹಟ್ಟಿ,ಹಾಗೂ ಹೂಸರ ಗ್ರಾಮಗಳಲ್ಲಿ ಕೈಗೊಂಡ
ರಸ್ತೆ ಹಾಗೂ ಕುಡಿಯುವ ನೀರು ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಸತೀಶ ಜಾರಕಿಹೊಳಿ ಅವರು ಗ್ರಾಮದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡಿದ್ದರು. ಈ ನಿಮಿತ್ಯ ಇಂದು ಅವರ ಸಹೋದರ ಲಖನ್ ಜಾರಕಿಹೊಳಿ ಅವರು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿ ಗ್ರಾಮಸ್ಥರ ಶ್ಲಾಘನೆಗೆ ಪಾತ್ರರಾದರು.ಈ ಸಂದರ್ಭದಲ್ಲಿ ಗ್ರಾಮಸ್ಥರು ಲಖನ್ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ರಾಮಣ್ಣಾ ಗುಳ್ಳಿ, ಸಿದ್ದು, ಸುನಗಾರ ಗ್ರಾಮ ಪಂಚಾಯಿತಿ ಅದ್ಯಕ್ಷರು, ಉಪಾದ್ಯಕ್ಷರು, ಸದಸ್ಯರು ಸೇರಿದಂತೆ ಊರಿನ ಹಿರಿಯರು ಹಾಗೂ ಯುವಕರು ಉಪಸ್ಥಿತರಿದ್ದರು.