Breaking News

ಕೇರಳ, ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ: ಗಡಿಯಲ್ಲಿ ನಿಗಾವಹಿಸುವಂತೆ ಡಿಸಿಎಂ ಸೂಚನೆ

Spread the love

ಬೆಳಗಾವಿ: ಮಹರಾಷ್ಟ್ರ, ಕೇರಳ ರಾಜ್ಯದಲ್ಲಿ ಹೊಸ ಪ್ರಭೇದದ ಕೋವಿಡ್ ಪತ್ತೆ ಹಿನ್ನೆಲೆಯಲ್ಲಿ ಗಡಿಯಲ್ಲಿ
ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು.

ಸಾರ್ವಜನಿಕರು ಹೆಚ್ಚಿನ ಜಾಗೃತಿ ವಹಿಸಿ ಮಾಸ್ಕ್ ಧರಿಸಬೇಕು. ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಈಗಾಗಲೇ ಅಂತರರಾಜ್ಯ ಸಾರಿಗೆ ಆರಂಭವಾಗಿದೆ. ಈ ಮೊದಲಿನಂತೆ ಜಾಗೃತಿ ವಹಿಸಲು ಸೂಚನೆ ನೀಡಲಾಗಿದೆ ಎಂದರು.

ಇನ್ನು ಪಂಚಮಸಾಲಿ ಸಮುದಾಯ 2ಎಗೆ ಸೇರಿಸಬೇಕು ಎಂಬ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸಿ, ಸಮಾಜದ ಹೋರಾಟಕ್ಕೆ ನನ್ನ ಬೆಂಬಲವಿದೆ. ಸುವರ್ಣ ವಿಧಾನಸೌಧದಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ ನಡೆಸಿದ ಸಂದರ್ಭದಲ್ಲಿ ನಾನೇ ಬೆಂಬಲ ನೀಡಿದ್ದೆ. ಸಚಿವ ಸಂಪುಟ ಸಭೆಯಲ್ಲಿ 2 ಎ ಮೀಸಲಾತಿಗೆ ವಿರೋಧ ವ್ಯಕ್ತವಾಗಿದೆ ಎಂಬುವುದು ವದಂತಿಯಷ್ಟೇ ಎಂದು ಹೇಳಿದ್ರು.


Spread the love

About Laxminews 24x7

Check Also

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು

Spread the love ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು ಅಮೆರಿಕಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ