Breaking News

ಮೃತರ ಕುಟುಂಬಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ

Spread the love

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಳೇಬೈಲ್ ಹಾಗೂ ಇನಾಂ ಬಡಸ್ ಗ್ರಾಮಗಳ ಕಾಂಗ್ರೆಸ್ ಪಕ್ಷದ ಮುಖಂಡರ ಕುಟುಂಬಗಳಲ್ಲಿ ಇತ್ತೀಚೆಗೆ ಸಂಭವಿಸಿದ ದುಃಖದ ಘಟನೆಗಳ ಹಿನ್ನೆಲೆಯಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಎಳೇಬೈಲ್ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡ ಧಾನಾಜಿ ರಾಮು ಮೊರೆ ಅವರ ಪತ್ನಿ ಮಂಗಲ ಮೊರೆ ಅವರು ಇತ್ತೀಚೆಗೆ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ದುಃಖದ ಸಂದರ್ಭದಲ್ಲಿ ಕುಟುಂಬದೊಂದಿಗೆ ತಾವು ಇರುವುದಾಗಿ ತಿಳಿಸಿ, ಸಾಂತ್ವನ ಹೇಳಿದರು.ಇದೇ ವೇಳೆ ಇನಾಂ ಬಡಸ್ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡ ನಾರಾಯಣ ಪಾಟೀಲ ಅವರ ತಾಯಿ ಯುಲ್ಲುಬಾಯಿ ಪಾಟೀಲ ಅವರು ಇತ್ತೀಚೆಗೆ ನಿಧನರಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಅವರ ನಿವಾಸಕ್ಕೂ ಭೇಟಿ ನೀಡಿದರು. ಕುಟುಂಬಸ್ಥರನ್ನು ಭೇಟಿಯಾಗಿ, ಮೃತರ ನಿಧನಕ್ಕೆ ಸಂತಾಪ ಸೂಚಿಸಿ, ಅವರ ದುಃಖದಲ್ಲಿ ಭಾಗಿಯಾದರು.ಎರಡೂ ಕುಟುಂಬಗಳೊಂದಿಗೆ ಕೆಲಕಾಲ ಆತ್ಮೀಯವಾಗಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.


Spread the love

About Laxminews 24x7

Check Also

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ – 19 ದಿನದಲ್ಲಿ 2.81 ಕೋಟಿ ಕಾಣಿಕೆ ಸಂಗ್ರಹ

Spread the loveರಾಯಚೂರು: ಕಲಿಯುಗದ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ  ಆಗಸ್ಟ್ ತಿಂಗಳಿನ 19 ದಿನದ ಕಾಣಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ