Breaking News

ಅಪಘಾತದಲ್ಲಿ ಗಾಯಗೊಂಡ ಯುವಕನ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳಕರ್ ನೆರವು

Spread the love

ಬೆಳಗಾವಿ: ಕಂಗ್ರಾಳಿ ಕೆ.ಎಚ್. ಗ್ರಾಮದ ಯುವಕ ಬಸವಂತ ಅಶೋಕ ಚೌಗುಲೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು, ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತುರ್ತು ಆರ್ಥಿಕ ನೆರವು ನೀಡಿದರು.
ಬಸವಂತ ಅವರ ತಾಯಿ ಕಮಲ್ ಅಶೋಕ್ ಚೌಗುಲೆ ಅವರು ಇಂದು ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾಗಿ, ತಮ್ಮ ಕುಟುಂಬದ ದುಸ್ಥಿತಿ ಹಾಗೂ ಮಗನ ಚಿಕಿತ್ಸೆಗೆ ಎದುರಾಗಿರುವ ಆರ್ಥಿಕ ಸಮಸ್ಯೆಗಳನ್ನು ವಿವರಿಸಿದರು.
ಬಡ ಕುಟುಂಬಕ್ಕೆ ಆಸರೆಯಾಗಿದ್ದ ಯುವಕ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದನ್ನು ಅರಿತ ಲಕ್ಷ್ಮೀ ಹೆಬ್ಬಾಳಕರ್ ಅವರು, ತಕ್ಷಣ ಸ್ಪಂದಿಸಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ತುರ್ತು ಆರ್ಥಿಕ ನೆರವು ಒದಗಿಸಿದರು.
ಬಸವಂತ ಅವರು ಶೀಘ್ರ ಗುಣಮುಖರಾಗಿ ಮತ್ತೆ ತಮ್ಮ ಕುಟುಂಬಕ್ಕೆ ಆಸರೆಯಾಗಲಿ ಎಂದು ಹಾರೈಸಿದ ಅವರು, ಯುವಕನ ಆರೋಗ್ಯಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸಿದರು.

ರೈಲ್ವೆ ಅಪಘಾತದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಸಾಂತ್ವನ

ಕೊಂಡಸಕೊಪ್ಪ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರಮೇಶ್ ದೇವಪ್ಪ ಪಾಟೀಲ ಅವರ 17 ವರ್ಷದ ಪುತ್ರ ರೋಹಿತ್ ಪಾಟೀಲ ಇತ್ತೀಚೆಗೆ ಸಂಭವಿಸಿದ ರೈಲ್ವೆ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಾಳಿ ಬದುಕಬೇಕಾದ ಚಿಕ್ಕ ವಯಸ್ಸಿನಲ್ಲೇ ರೋಹಿತ್ ಅವರನ್ನು ಕಳೆದುಕೊಂಡಿರುವುದು ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ವಿಷಾದಿಸಿದ ಅವರು, ದುಃಖತಪ್ತ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು.
ಮೃತ ರೋಹಿತ್ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಪುತ್ರನನ್ನು ಕಳೆದುಕೊಂಡ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಕರುಣಿಸಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥಿಸಿದರು.


Spread the love

About Laxminews 24x7

Check Also

ಟಿಬಿ ಮುಕ್ತ ಭಾರತ ಅಭಿಯಾನ ಅತ್ಯಂತ ಶ್ಲಾಘನೀಯ

Spread the loveಬೆಳಗಾವಿ : ಭಾರತವನ್ನು ಕ್ಷಯರೋಗ (ಟಿಬಿ) ಮುಕ್ತ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿಯಾನ ಅತ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ