Breaking News

ಜನರ ನೆಮ್ಮದಿಯ ಜೀವನವೇ ಲಕ್ಷ್ಮೀ ಹೆಬ್ಬಾಳಕರ್ ಅವರ ಗುರಿ : ಮೃಣಾಲ ಹೆಬ್ಬಾಳಕರ್

Spread the love

ಬೆಳಗಾವಿ ಗ್ರಾಮೀಣ ಕ್ಷೇತ್ರದ ರಣಕುಂಡೆ ಗ್ರಾಮದೊಳಗಿನ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಬುಧವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ಸುಮಾರು 71 ಲಕ್ಷ ರೂ,ಗಳ ಅನುದಾನದಲ್ಲಿ ರಸ್ತೆಗಳು ನಿರ್ಮಾಣಗೊಳ್ಳಲಿವೆ. ನಿಗದಿತ ಸಮಯದಲ್ಲಿ ಗುಣಮಟ್ಟದ ರಸ್ತೆ ನಿರ್ಮಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಮೃಣಾಲ ಹೆಬ್ಬಾಳಕರ್ ಗುತ್ತಿಗೆದಾರರಿಗೆ ಸೂಚಿಸಿದರು. ಗ್ರಾಮೀಣ ಕ್ಷೇತ್ರದಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಸುಧಾರಣೆಯ ಕ್ರಾಂತಿ ನಡೆಯುತ್ತಿದ್ದು, ಜನರ ನೆಮ್ಮದಿಯ ಜೀವನವೇ ಲಕ್ಷ್ಮೀ ಹೆಬ್ಬಾಳಕರ್ ಅವರ ಗುರಿಯಾಗಿದೆ ಎಂದು ಅವರು ಹೇಳಿದರು.

ಈ ವೇಳೆ ಕಾಡಾ ಅಧ್ಯಕ್ಷರಾದ ಯುವರಾಜ ಕದಂ, ಭರಮಣ್ಣ ಪಾಟೀಲ, ವಸಂತ ತಹಶಿಲ್ದಾರ, ನೂರ್ ದಶಕೆಲ್ದಾರ್, ನಿಂಗಪ್ಪ ಪಾಟೀಲ, ಬಾಬಾಜಾನ್ ಸಯ್ಯದ್, ಸಿದ್ದರಾಮ ಪಾಟೀಲ, ಬಾಳೇಶ್ ಜಾಂಬೋಟಿ, ನಿಯಾಜ ಬುಖಾರಿ, ಗುಂಡು ಜಾಂಬೋಟಿ, ರಾಮಲಿಂಗ ಮೊರೆ, ರವಳು ಪಾಟೀಲ, ಯಲ್ಲಪ್ಪ ಕಾಂಬಳೆ, ಮಾರುತಿ ಕೊಳೆಕರ್ ಮುಂತಾದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸಿಸಿಬಿ ಪೊಲೀಸರ ದಾಳಿ: 3 ಲಕ್ಷ ಮೌಲ್ಯದ ಗಾಂಜಾ ಜಪ್ತಿ

Spread the loveಬೆಳಗಾವಿ: ಕಾಕತಿ ಎನ್ಎಚ್-48 ರ ಸರ್ವಿಸ ಮಾರ್ಗದಲ್ಲಿರುವ ಚಿಗರಿ ಪ್ರಕೃತಿ ಶಿಬಿರದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ