ಬೆಂಗಳೂರು, ಜೂ.- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ಇದೇ 29ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ವಿರೋಧ ಪಕ್ಷಗಳಾದ ಕಾಂಗ್ರೆಸ್‍ನ ಇಬ್ಬರು, ಜೆಡಿಎಸ್‍ನ ಒಬ್ಬ ಹಾಗೂ ಆಡಳಿತಾರೂಢ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಈ ಮೂರು ಪಕ್ಷಗಳಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇದುವರೆಗೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕಡೆ ದಿನ
ಅಭ್ಯರ್ಥಿಗಳ ಆಯ್ಕೆ ಸಂಬಂಧ ಆಯಾ ರಾಜಕೀಯ ಪಕ್ಷಗಳು ಸಭೆ ನಡೆಸಿ ಅಂತಿಮ ಪಟ್ಟಿ ಸಿದ್ಧಪಡಿಸಿಕೊಂಡಿವೆ. ಆಕಾಂಕ್ಷಿಗಳ ಒತ್ತಡ ಹೆಚ್ಚಾಗಿರುವುದರಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ ವಿಳಂಬವಾಗಿದೆ. ಆಯಾ ಪಕ್ಷದ ಹೈ ಕಮಾಂಡ್ ಬಿಡುಗಡೆ ಮಾಡುವ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ನಾಯಕರು ಹಾಗೂ ಆಕಾಂಕ್ಷಿಗಳು ನಿರೀಕ್ಷಿಸುತ್ತಿದ್ದಾರೆ. ಜೂ.11ರಂದೇ ಚುನಾವಣೆ ಅಧಿಸೂಚನೆ ಹೊರಡಿಸಲಾಗಿದ್ದರೂ ನಿನ್ನೆಯವರೆಗೆ ಯಾವುದೇ ಅಭ್ಯರ್ಥಿ ತಮ್ಮ ಉಮೇದುವಾರಿಕೆ ಸಲ್ಲಿಸಿಲ್ಲ