ಕೊಪ್ಪಳ: 5 ವರ್ಷದ ಕಂದಮ್ಮನ ಮೇಲೆ ಕಾಮಾಂಧನೊಬ್ಬ ಅತ್ಯಾಚಾರವೆಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.
ಅ.31ರಂದು ನಡೆದಿದ್ದ ಗಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಾಲಕಿ ತಾಯಿ ಗಂಗಾವತಿ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಸುರೇಶ್ ಅಲಿಯಾಸ್ ಸೂರಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯನ್ನು ಹೊತ್ತೊಯ್ದ ಆರೋಪಿ ಕುತ್ಯವೆಸಗಿದ್ದಾನೆ ಎನ್ನಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.