Breaking News

ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಭಾಲ್ಕಿ ನಗರ ಪೊಲೀಸ್ ಠಾಣೆ ಸಿಪಿಐ; ಲಂಚ ಪಡೆಯುವ ವಿಡಿಯೋ ವೈರಲ್

Spread the love

ಬೀದರ್: ಜಿಲ್ಲೆಯ ಭಾಲ್ಕಿ ನಗರ ಪೊಲೀಸ್ ಠಾಣೆ ಸಿಪಿಐ ಲಂಚ ಪಡೆಯುವ ವಿಡಿಯೋ ವೈರಲ್ ಆಗಿದೆ. ಸಿಪಿಐ P.R.ರಾಘವೇಂದ್ರ ವಿರುದ್ಧ ಲಂಚ ಸ್ವೀಕಾರ ಆರೋಪ ಕೇಳಿ ಬಂದಿದ್ದು ಲಂಚ ಪಡೆಯುವ ವಿಡಿಯೋ ವೈರಲ್ ಆಗಿದೆ.

ಭಾಲ್ಕಿ ನಗರ ಪೊಲೀಸ್ ಠಾಣೆ ಸಿಪಿಐ P.R.ರಾಘವೇಂದ್ರ ಪೊಲೀಸ್ ಸಮವಸ್ತ್ರದಲ್ಲಿ ವ್ಯಕ್ತಿಯಿಂದ ಲಂಚ ಪಡೆದಿದ್ದಾರೆ. ಈ ಲಂಚದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಪಿಐ ರಾಘವೇಂದ್ರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಕೆಲದಿನಗಳ ಹಿಂದಷ್ಟೇ ಭಾಲ್ಕಿ ನಗರಕ್ಕೆ ಸಿಪಿಐಯಾಗಿ P.R.ರಾಘವೇಂದ್ರ ವರ್ಗಾವಣೆಯಾಗಿದ್ದರು. ಸಣ್ಣಪುಟ್ಟ ವಿಷಯಕ್ಕೆ ಸಾರ್ವಜನಿಕರಿಗೆ ಕಿರುಕುಳು ಕೊಡುತ್ತಿದ್ದರು ಎಂಬ ಆರೋಪ ಸಹ ಕೇಳಿ ಬಂದಿದೆ.

ಪಿಎಸ್ಐ ಧಮ್ಕಿಗೆ ನೊಂದು ಮೂವರು ಆತ್ಮಹತ್ಯೆ ಯತ್ನ

ಇನ್ನು ಮತ್ತೊಂದು ಕಡೆ ದೂರು ತೆಗೆದುಕೊಳ್ಳದೇ ಪ್ರತಿ ದೂರು ದಾಖಲಿಸಿಕೊಂಡು ಬಂಧಿಸುವುದಾಗಿ ಪಿಎಸ್ಐ ಧಮ್ಕಿ ನೀಡಿರುವ ಘಟನೆ ನಡೆದಿದೆ. ಹೀಗಾಗಿ ಮನನೊಂದ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯನ ಕುಟಂಬ ಆತ್ಮಹತ್ಯೆಗೆ ಯತ್ನಿಸಿದೆ

.ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ವಿಷ ಬಾಟಲಿ ಮುಂದಿಟ್ಟು ವಿಡಿಯೋ ಮಾಡಿ ಒಂದೇ ಮನೆಯ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗುಡಗೇರಿ ಪೊಲೀಸ್ ಠಾಣೆ ಪಿಎಸ್ಐ ಸವಿತಾ ಮುನ್ನಳ್ಳಿ ಮೇಲೆ ಆರೋಪ ಕೇಳಿ ಬಂದಿದ್ದು ಗ್ರಾ.ಪಂ. ಮಾಜಿ ಸದಸ್ಯ ಸಿದ್ಧಪ್ಪ ಕಳಸಣ್ಣನವರ, ಪುತ್ರ ಬಸವರಾಜ ಕಳಸಣ್ಣನವರ ಹಾಗೂ ಯಲ್ಲಪ್ಪ ಕಳಸಣ್ಣನವರ ಆತ್ಮಹತ್ಯಗೆ ಯತ್ನಿಸಿದ್ದಾರೆ. ಸದ್ಯ ಮೂವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೂವರ ಸ್ಥಿತಿಯೂ ಸ್ವಲ್ಪ ಗಂಭೀರವಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ