ಬೀದರ್: ಭೂ ಕಬಳಿಕೆ ಸಂಬಂಧ ಶಾಸಕ ಪ್ರಭು ಚೌಹಾಣ್ಗೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇದ ವಿಶೇಷ ನ್ಯಾಯಾಲಯದಿಂದ ನೋಟಿಸ್ ಜಾರಿಯಾಗಿದೆ.
2027 ಜನವರಿ 19ರ ಒಳಗೆ ನೋಟಿಸ್ಗೆ ಪ್ರತಿಕ್ರಿಯೆ ನೀಡಲು ಸೂಚನೆ ನೀಡಲಾಗಿದೆ. ಬೀದರ್ ತಾಲೂಕಿನ ಕೊಳ್ಳಾರ ಗ್ರಾಮದ ಸರ್ವೆ ನಂಬರ್ 102ರಲ್ಲಿ 3 ಎಕರೆ ಜಾಗ ಕಬಳಿಕೆ ಆರೋಪ ಕೇಳಿ ಬಂದಿದ್ದು, ಕಮಲ ನಗರ ತಾಲೂಕಿನ ಚೌಂದೋರಿ ಗ್ರಾಮದ ಗ್ರಾ.ಪಂ ಅಧ್ಯಕ್ಷ ದೀಪಕ್ ಪಾಟೀಲ್ ಕೋರ್ಟ್ಗೆ ದಾವೆ ಹೂಡಿದ್ದರು.
ದಾಖಲೆಗಳ ಪ್ರಕಾರ ಈ ಜಮೀನು ಸರ್ಕಾರಕ್ಕೆ ಸೇರಿದ್ದು, ಈ ಹಿಂದೆ ಜಿಲ್ಲಾಧಿಕಾರಿಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ ದೀಪಕ್ ಪಾಟೀಲ್ ಭೂ ಕಬಳಿಕೆ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು.
Laxmi News 24×7