ಕಲಬುರಗಿ: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ಗೆ ಇದೀಗ ಭೂಕಂಟಕ ಎದುರಾಗಿದ್ದು, ಜಮೀನು ಕಬಳಿಕೆ ಆರೋಪದಡಿ ಶಿವಶಂಕರಪ್ಪ ಹಾಗೂ ಅವರ ಅಳಿಯನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವಿಶ್ವನಾಥ್ ಪಾಟೀಲ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ಜಿಲ್ಲೆಯ ಶಹಾಪುರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಶಹಾಪುರ ತಾಲೂಕಿನ ಅಣಬಿ ಗ್ರಾಮದಲ್ಲಿ 10 ಎಕರೆ 20 ಗುಂಟೆ ಜಮೀನು ಕಬಳಿಕೆ ಮಾಡಲಾಗಿದೆ. ನನ್ನ ಮಲತಾಯಿ ಬಸಮ್ಮಗೌಡತಿಗೆ ಮಕ್ಕಳಿರಲಿಲ್ಲ. ಆದರೆ ಶಿವಶಂಕರಪ್ಪ ಸಾಹುಕಾರ್ ಅಳಿಯನಾದ ಶಂಕರಗೌಡನನ್ನು ಮಗ ಎಂದು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿದ್ದಾರೆ. ಜಮೀನು ಕಬಳಿಕೆ ಬಳಿಕ ಅಳಿಯನಿಂದ ತನ್ನ ಹೆಸರಿಗೆ ಜಮೀನು ಮಾಡಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Laxmi News 24×7