Breaking News

ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಚೇತರಿಕೆ; ವೈದ್ಯರು ನೀಡಿದ ಮಾಹಿತಿ ಇಲ್ಲಿದೆ

Spread the love

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ. ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಪ್ರತೀತ್ ಸಮ್ದಾನಿ ಮಾಹಿತಿ ನೀಡಿದ್ದಾರೆ. ಈ ಕುರಿತು ಎಎನ್​ಐ ಶನಿವಾರ ಮಾಹಿತಿ ನೀಡಿದೆ. ಈ ತಿಂಗಳ ಆರಂಭದಲ್ಲಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ (Covid) ಪಾಸಿಟಿವ್ ಆಗಿತ್ತು. ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಇತ್ತೀಚೆಗೆ ಲತಾ ಅವರ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹಂಚಿಕೆಯಾಗಿತ್ತು. ಅದನ್ನು ಉಲ್ಲೇಖಿಸಿ ಲತಾ ಮಂಗೇಶ್ಕರ್ ವಕ್ತಾರರು ಗಾಯಕಿಯ ಖಾತೆಯಿಂದ ಟ್ವೀಟ್ ಮಾಡಿ, ‘92 ವರ್ಷದ ಲತಾ ಅವರು ಐಸಿಯುವಿನಲ್ಲಿದ್ದಾರೆ. ಚಿಕಿತ್ಸೆ ಮುಂದುವರೆಯುತ್ತಿದೆ. ಯಾರೂ ತಪ್ಪು ಮಾಹಿತಿ ಅಥವಾ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ’’ ಎಂದು ತಿಳಿಸಿದ್ದರು. ಹಾಗೆಯೇ ಗಾಯಕಿ ಹಾಗೂ ಅವರ ಕುಟುಂಬದ ಖಾಸಗಿತನಕ್ಕೆ ಭಂಗ ತರದಂತೆ ವಕ್ತಾರರು ಕೋರಿಕೊಂಡಿದ್ದರು. ಇದೀಗ ಲತಾ ಅವರ ಆರೋಗ್ಯದಲ್ಲಿ ತುಸು ಚೇತರಿಕೆಯಾಗಿದ್ದು, ಅಭಿಮಾನಿಗಳಿಗೆ ಸಮಾಧಾನ ತಂದಿದೆ.


Spread the love

About Laxminews 24x7

Check Also

ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ – ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ– -ಎಸಿಪಿ ನಾರಾಯಣ ಬರಮನಿ

Spread the love ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ – ಜೀವನದ ಆದರ್ಶಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ