Breaking News

ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

Spread the love

ಕೋಲ್ಕತ್ತಾ: ಇವಿಎಂ ಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್‌ಗಳನ್ನು ಅಕ್ರಮವಾಗಿ ತೆರೆಯಲಾಗಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

ತಾವು ಸ್ಪರ್ಧಿಸಿರುವ ಭವಾನಿಪುರಕ್ಷೇತ್ರದ ಮತ ಎಣಿಕಾ ಕೇಂದ್ರವಾದ ಸಖಾವತ್ ಮೆಮೋರಿಯಲ್ ಸ್ಕೂಲ್ ಬಳಿ ಮಮತಾ ಬ್ಯಾನರ್ಜಿ ಅವರು ಸ್ವತಃ ಭೇಟಿ ನೀಡಿ ಸುಮಾರು ನಾಲ್ಕು ಗಂಟೆಗಳ ಕಾಲ ತಂಗಿದ್ದರು.

ಇವಿಎಂ ಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್‌ಗಳನ್ನು ಅಕ್ರಮವಾಗಿ ತೆರೆಯಲಾಗಿದೆ ಮತ್ತು ಅವುಗಳ ಟ್ಯಾಂಪರಿಂಗ್‌ಗೆ  ಸಂಚು ರೂಪಿಸಲಾಗಿದೆ. ಸ್ಟ್ರಾಂಗ್ ರೂಮ್‌ ಒಳಗಡೆ ಅಪರಿಚಿತ ವ್ಯಕ್ತಿಗಳಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

ಈ ವೇಳೆ ಮಾತನಾಡಿದ ಮಮತಾ ಬ್ಯಾನರ್ಜಿ, ಇವಿಎಂಗಳನ್ನು ಕಾವಲು ಕಾಯಲು ಕಾರ್ಯಕರ್ತರು 24 ಗಂಟೆಗಳ ಕಾಲ ಜಾಗರೂಕರಾಗಿರಬೇಕು ಮತ್ತು ಮಾಧ್ಯಮಗಳಿಗೆ ಸಿಸಿಟಿವಿ ಪ್ರವೇಶವನ್ನು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ

ಸಚಿವೆ ಶಶಿ ಪಂಜಾ ಮತ್ತು ಟಿಎಂಸಿ ವಕ್ತಾರ ಕುನಾಲ್ ಘೋಷ್ ಅವರು ಕೋಲ್ಕತ್ತಾದ ನೇತಾಜಿ ಇಂದೋರ್ ಸ್ಟೇಡಿಯಂ ಮತ್ತು ಖುದೀರಾಮ್ ಅನುಶೀಲನ್ ಕೇಂದ್ರದ ಹೊರಗೆ ರಾತ್ರಿಯಿಡೀ ಧರಣಿ ನಡೆಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ