Breaking News

ಜಿರಳೆಗಳ ವಿರುದ್ಧ ಲಾಠಿಚಾರ್ಜ್| ವಿಡಿಯೋ ನೋಡಲು ಸಮಯವಿಲ್ಲ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Spread the love

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ  ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ‘ಸಂಸದ್ ಚಲೋ’ ಪ್ರತಿಭಟನೆ ವೇಳೆ ದೆಹಲಿ ಪೊಲೀಸರ  ಲಾಠಿಚಾರ್ಜ್ ಮತ್ತು ಬಲಪ್ರಯೋಗದ ವಿರುದ್ಧ ಸ್ವಯಂಪ್ರೇರಿತ  ದೂರು ದಾಖಲಿಸಿಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಈ ಕುರಿತ ಅರ್ಜಿಯ ತುರ್ತು ವಿಚಾರಣೆಗೆ ನಕಾರ ವ್ಯಕ್ತಪಡಿಸಿತು.

ಅರ್ಜಿದಾರ ವಕೀಲರು ಪೊಲೀಸರ ಕೃತ್ಯವನ್ನು ಸಾಬೀತುಪಡಿಸಲು ವಿಡಿಯೋ ಸಾಕ್ಷ್ಯಗಳನ್ನು ಸಲ್ಲಿಸಲು ಮುಂದಾದಾಗ, ನಮ್ಮ ಸಮಯವನ್ನೂ ವ್ಯರ್ಥ ಮಾಡಬೇಡಿ, ನಿಮ್ಮ ಸಮಯವನ್ನೂ ಹಾಳು ಮಾಡಿಕೊಳ್ಳಬೇಡಿ ಎಂದು ಸಿಜೆಐ ಎಚ್ಚರಿಸಿದರು.

ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸುವಂತೆ ವಕೀಲರು ಕೋರಿದಾಗ, “ನಮಗೆ ವಿಡಿಯೋಗಳನ್ನು ನೋಡುವ ಆಸಕ್ತಿಯಿಲ್ಲ, ಅದನ್ನು ನೋಡಲು ನಮ್ಮ ಬಳಿ ಸಮಯವೂ ಇಲ್ಲ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಯಮಾಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ಖಡಕ್ ಆಗಿ ತಿಳಿಸಿತು.

ಇದಕ್ಕೂ ಮುನ್ನ ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಅವರ ಪೀಠವೂ ಕೂಡ ಈ ಪ್ರಕರಣದ ತುರ್ತು ವಿಚಾರಣೆಗೆ ನಿರಾಕರಿಸಿತ್ತು. ಕೋರ್ಟ್‌ ಅನ್ನು ಈ ವಿಷಯಗಳಿಗೆ ಎಳೆದು ತರಬೇಡಿ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ನೀಟ್‌ ಪರೀಕ್ಷಾ ಅಕ್ರಮ ಖಂಡಿಸಿ ಹಾಗೂ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಜುಲೈ 20ರಂದು ಕರೆ ನೀಡಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ದೆಹಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಈ ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಪೊಲೀಸರ ಅತಿಯಾದ ಬಲಪ್ರಯೋಗವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗಿತ್ತು.


Spread the love

About Laxminews 24x7

Check Also

ಯಡಿಯೂರಪ್ಪ ರಸ್ತೆಯಲ್ಲಿನ ಅಪಾಯಕಾರಿ ಗುಂಡಿಗಳನ್ನು ತಕ್ಷಣ ಮುಚ್ಚಿ: ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Spread the love ಯಡಿಯೂರಪ್ಪ ರಸ್ತೆಯಲ್ಲಿನ ಅಪಾಯಕಾರಿ ಗುಂಡಿಗಳನ್ನು ತಕ್ಷಣ ಮುಚ್ಚಿ: ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಅಲಾರವಾಡ ಅಂಡರ್‌ಬ್ರಿಡ್ಜ್ ಸರ್ಕಲ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ