Breaking News

ಎರಡು ಪ್ರತ್ಯೇಕ ಬೈಕ್ ಅಪಘಾತ ಪ್ರಕರಣ; ಇಬ್ಬರ ಸಾವು

Spread the love

ಲಕ್ಷ್ಮೇಶ್ವರ: ಎರಡು ಪ್ರತ್ಯೇಕ ಬೈಕ್ ಅಪಘಾತ ಪ್ರಕರಣದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಬಾಲಕ ತೀವ್ರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.

ಪಟ್ಟಣದ ಹೊರವಲಯದಲ್ಲಿ ಬೈಕ್ ಸವಾರನೊಬ್ಬ ನೀರು ತರುವ ದೂಡುವ ಗಾಡಿಗೆ ಡಿಕ್ಕಿ ಹೊಡೆದು, ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಬೈಕ್ ಸವಾರ ಲಕ್ಷ್ಮೇಶ್ವರ ಪಟ್ಟಣದ ಕಲ್ಮೇಶ ಶೇಖಪ್ಪ ಬೆಂಗೇರಿ (24) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

ಇನ್ನೊಂದು ಬೈಕ್ ಅಪಘಾತ ಪ್ರಕರಣದಲ್ಲಿ ಸಮೀಪದ ಗೊಜನೂರ ಹತ್ತಿರ ಮೈಲಾರೆಪ್ಫ ಎಂಬಾತ ಮೃತಪಟ್ಟಿದ್ದು, 10 ವರ್ಷದ ಬಾಲಕ ಕಿರಣ್ ಬಾರಕೇರ ತೀವ್ರವಾಗಿ ಗಾಯಗೊಂಡಿದ್ದಾನೆ. ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಅಪಘಾತದಲ್ಲಿ ಮೃತಪಟ್ಟವರು ಸವಣೂರು ತಾಲ್ಲೂಕಿನ ಕಡಕೋಳ ಗ್ರಾಮದವರು ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ