Breaking News

ರಾಜ್ಯದಲ್ಲಿ ಹೆಚ್ಚಾದ ಕರೊನಾ ಆತಂಕ; ಸಿಎಂ ಸಭೆಯಲ್ಲಿ ಹೊರಬಿತ್ತು ಹೊಸ ಗೈಡ್​​ಲೈನ್ಸ್​: ಇಲ್ಲಿದೆ ವಿವರ.

Spread the love

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಹೆಚ್ಚಳದ ಜತೆಗೆ ಕರೊನಾ ರೂಪಾಂತರಿ ಒಮಿಕ್ರೋನ್​ ಭೀತಿಯೂ ಉಂಟಾಗಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್​-19 ನಿಯಂತ್ರಣ ಸಂಬಂಧ ವಿಶೇಷ ಸಭೆ ನಡೆಸಲಾಗಿದೆ.

ಕರೊನಾ ಪ್ರಕರಣಗಳ ನಿಯಂತ್ರಣ ಹಾಗೂ ಸೋಂಕು ತಡೆ ಸಲುವಾಗಿ ಸಭೆಯಲ್ಲಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ಪ್ರಮುಖ ನಿರ್ಧಾರಗಳ ವಿವರ ಇಂತಿದೆ.

  • ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವುದು.
  • ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು.
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್​ಟಿಪಿಸಿಆರ್​ ನೆಗೆಟಿವ್ ರಿಪೋರ್ಟ್ ಕಡ್ಡಾಯ.
  • ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್​​ಗಳಲ್ಲಿ ಕೆಲಸ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.
  • ಹದಿನಾರು ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್​ಟಿಪಿಸಿಆರ್​ ಪರೀಕ್ಷೆ ಮಾಡಿಸಬೇಕು.
  • ಹಾಸ್ಟೆಲ್​ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ ಏಳನೇ ದಿನಕ್ಕೆ ಮತ್ತೊಮ್ಮೆ ಆರ್​ಟಿಪಿಸಿಆರ್​ ಪರೀಕ್ಷೆ ಕಡ್ಡಾಯ.
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.
  • ಹೋಟೆಲ್​, ರೆಸ್ಟೋರೆಂಟ್‌, ಸಿನಿಮಾ ಮಂದಿರ, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಲಸಿಕೆಯ ಎರಡೂ ಡೋಸ್ ಪಡೆದಿರಬೇಕು.
  • ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.
  • ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು
  • ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.
  • ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.

Spread the love

About Laxminews 24x7

Check Also

ಇಂದೋರಿಗೆ ತೆರಳಿದ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರ ನಿಯೋಗ…

Spread the love ಇಂದೋರಿಗೆ ತೆರಳಿದ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರ ನಿಯೋಗ… ತ್ಯಾಜ್ಯ ನಿರ್ವಹಣೆ ಮತ್ತು ಸ್ವಚ್ಛತಾ ಮಾದರಿಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ