Breaking News

ವಾಲ್ಮೀಕಿ ನಿಗಮದ ಅಕ್ರಮ: ಇಬ್ಬರು ಅಧಿಕಾರಿಗಳ ಸೆರೆ

Spread the love

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ಬೇರೆಡೆ ವರ್ಗಾವಣೆಯಾದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ ಇಬ್ಬರು ಅಧಿಕಾರಿಗಳನ್ನು ಬಂಧಿಸಿದೆ.

ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.

ವಾಲ್ಮೀಕಿ ನಿಗಮದ ಅಕ್ರಮ: ಇಬ್ಬರು ಅಧಿಕಾರಿಗಳ ಸೆರೆ

ಪದ್ಮನಾಭ ಮತ್ತು ಮಾಜಿ ಲೆಕ್ಕಾಧಿಕಾರಿ ಪರಶುರಾಮ್‌ ಜಿ.ದುರ್ಗಣ್ಣನವರ್‌ ಬಂಧಿತರು. ನಿಗಮದ ವ್ಯವಸ್ಥಾಪಕ ಎ.ರಾಜಶೇಖರ್‌ ಮೇ 28ರಂದು ನಗರದ ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಅಕ್ರಮದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿತ್ತು. ಹೀಗಾಗಿ ಶನಿವಾರ ಸಿಐಡಿ ಕಚೇರಿಯಲ್ಲಿ ಇಬ್ಬರನ್ನೂ ವಿಚಾರಣೆ ನಡೆಸಿ, ಬಂಧಿಸಲಾಗಿದೆ. ಬಳಿಕ ಕೋರ್ಟ್‌ಗೆ ಹಾಜರುಪಡಿಸಿ ಆರು ದಿನಗಳ ಕಾಲ ಎಸ್‌ಐಟಿ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೇ 30ರಂದು ಈ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿತ್ತು.

ನಿಗಮದ ಪ್ರಧಾನ ವ್ಯವಸ್ಥಾಪಕ ಎ.ರಾಜಶೇಖರ್‌ ಮೇ 28ರಂದು ಹೈಗ್ರೌಂಡ್ಸ್‌ ಠಾಣೆಯಲ್ಲಿ ನೀಡಿದ ದೂರಿನ್ವಯ ಪೊಲೀಸರು ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾದ ಪ್ರಧಾನ ವ್ಯವಸ್ಥಾಪಕಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಣಿಮೇಖಲೈ, ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರಾದ ನಿತೇಶ್‌ ರಂಜನ್‌, ರಾಮಸುಬ್ರಮಣಿಯಂ, ಸಂಜಯ್‌ ರುದ್ರ, ಪಂಕಜ್‌ ದ್ವಿವೇದಿ ಹಾಗೂ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕಿ ಸುಚಿಸ್ಮಿತಾ ರೌಲ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ