Breaking News
Home / ಜಿಲ್ಲೆ / ಜನರ ಜೀವದ ಜತೆಗೆ ಚೆಲ್ಲಾಟವಾಡಿ ಪರಿಸ್ಥಿತಿ ಲಾಭ ಪಡೆದುಕೊಳ್ಳವವರಿಗೆ ತಕ್ಕ ಶಾಸ್ತಿ:ಲಕ್ಷ್ಮಣ ಸವದಿ

ಜನರ ಜೀವದ ಜತೆಗೆ ಚೆಲ್ಲಾಟವಾಡಿ ಪರಿಸ್ಥಿತಿ ಲಾಭ ಪಡೆದುಕೊಳ್ಳವವರಿಗೆ ತಕ್ಕ ಶಾಸ್ತಿ:ಲಕ್ಷ್ಮಣ ಸವದಿ

Spread the love

ಬೆಂಗಳೂರು : ಜನರ ಜೀವದ ಜತೆಗೆ ಚೆಲ್ಲಾಟವಾಡಿ ಪರಿಸ್ಥಿತಿ ಲಾಭ ಪಡೆದುಕೊಳ್ಳವವರಿಗೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಖಾಸಗಿ ವಾಹನಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾ ವೈರಸ್ ತಡೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಸಾರಿಗೆ ಸಂಸ್ಥೆಗಳ ಬಸ್ಸುಗಳ ಮತ್ತು ರೈಲು ಸಂಚಾರಗಳನ್ನು ಕಡಿಮೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಖಾಸಗಿ ವಾಹನಗಳ ಮಾಲೀಕರು ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆದು ಸೂಲಿಗೆ ಮಾಡುತ್ತಿದ್ದಾರೆ ಎಂದು ಆರೋಪಗಳು ಕೇಳಿ ಬರುತ್ತಿವೆ. ಅಂತವ ವಿರುದ್ಧ ತಕ್ಕಶಾಸ್ತಿ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈಗಾಗಲೇ ಇಂತಹ ಪ್ರಕರಣಗಳನ್ನು ತಡೆಗಟ್ಟಬೇಕೆಂದು ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆದಾಗ್ಯೂ ಇಂತಹ ಪ್ರಕರಣಗಳು ಮರುಕಳಿಸಿದರೆ ಅಂತಹವರ ವಿರುದ್ಧ ಬಿಗಿ ಕ್ರಮ ಕೈಗೊಳ್ಳಲು ಹಿಂದೆಮುಂದೆ ನೋಡುವುದಿಲ್ಲ ಎಂದು ಹೇಳಿದ್ದಾರೆ.

ಕರೋನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ಈ ಎಲ್ಲ ಕ್ರಮಗಳಿಗೆ ಖಾಸಗಿ ವಾಹನ ಸಂಸ್ಥೆಗಳು ಮತ್ತು ಸಾರ್ವಜನಿಕರು ತಮ್ಮ ಸಂಪೂರ್ಣ ಸಹಕಾರವನ್ನು ನೀಡಬೇಕೆಂದು ರಾಜ್ಯದ ಜನತೆಗೆ


Spread the love

About Laxminews 24x7

Check Also

ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪಾಲ್​ಗೆ ಷರತ್ತು ಬದ್ದ ಜಾಮೀನು

Spread the love ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ