Breaking News
Home / Uncategorized / ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಣೆ….:ಲಕ್ಷ್ಮಣ ಸವದಿ..

ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಣೆ….:ಲಕ್ಷ್ಮಣ ಸವದಿ..

Spread the love

ಬೆಂಗಳೂರು : ಇಂಧನ ಕ್ಷಮತೆಗೆ ವಿಶೇಷ ಒತ್ತು ನೀಡಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯೂ ನಿಗಮಗಳಲ್ಲಿ ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಣೆ ಮಾಡಿದೆ.ನಗರದ ಕೆಎಸ್​ಆರ್​ಟಿಸಿ ಕೇಂದ್ರ ಕಚೇರಿಯಲ್ಲಿ, ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಂದ ವಿಡಿಯೋ ಕಾನ್ಫರೆನ್ಸ್​ ನಡೆಸಲಾಯಿತು.

ಈ ವೇಳೆ ಬಿಎಂಟಿಸಿ ಅಧ್ಯಕ್ಷ ಎನ್.ಎಸ್. ನಂದೀಶ್ ರೆಡ್ಡಿ, ನಿರ್ದೇಶಕಿ ಶಿಖಾ ಹಾಗೂ ಕೆಎಸ್​ಆರ್​ಟಿಸಿಯ ನಿರ್ದೇಶಕ ಶಿವಯೋಗಿ ಕಳಸದ, ನಾಲ್ಕು ಸಾರಿಗೆ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರುಗಳು ಹಾಗೂ 41 ವಿಭಾಗೀಯ ನಿಯಂತ್ರಣಾಧಿಕಾರಿಗಳೊಂದಿಗೆ ಕಾನ್ಫರೆನ್ಸ್​ ನಡೆಸಿದರು.

ಈ ವೇಳೆ ಮಾತನಾಡಿದ ಸವದಿ ಅವರು,ನಾಲ್ಕು ಸಾರಿಗೆ ನಿಗಮಗಳಲ್ಲಿ ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಓರ್ವ ಚಾಲಕನಿಗೆ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸಾರಿಗೆ ಇಲಾಖೆಯಿಂದ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ತಿಳಿಸಿದರು. ರಾಜ್ಯದಿಂದ ರಾಜ್ಯಕ್ಕೆ ಮತ್ತು ಜಿಲ್ಲೆಯಿಂದ ಜಿಲ್ಲೆಗೆ ಹೋಗುವವರಿಗೆ ಒಪ್ಪಂದದ ಮೇರೆಗೆ ಗುತ್ತಿಗೆಗೆ ಬಸ್ ನೀಡಲು ರಾಜ್ಯ ಸಾರಿಗೆ ಸಂಸ್ಥೆ ತೀರ್ಮಾನಿಸಿದೆ.

ನಿಗಮದ ಬಸ್ಸುಗಳನ್ನು ಗುತ್ತಿಗೆಗೆ ನೀಡಲು ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಲವು
ಷರತ್ತುಗಳನ್ನು ವಿಧಿಸಿ,ಸಂಚಾರಕ್ಕೆ ಅನುವು ಮಾಡಿಕೊಡುವ ತೀರ್ಮಾನಕ್ಕೆ ಬರಲಾಯಿತು ಎಂದು ಹೇಳಿದರು.

ಲಾಕ್‌ಡೌನ್‌ನಿಂದಾಗಿ ಸಾರಿಗೆ ಸಂಸ್ಥೆಗಳು ಇಂದು ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿ ಎದುರಿಸುತ್ತಿದೆ. ನಾವೆಲ್ಲರೂ ಮುಂದಿನ ದಿನಗಳಲ್ಲಿ ತಂಡವಾಗಿ ಕರ್ತವ್ಯ ನಿರ್ವಹಿಸಿ, ಪರಿಸ್ಥಿತಿಯನ್ನು ನಿಭಾಯಿಸಲು ಸಮರ್ಥರಾಗಿರಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹೇಳಿದರು.

ಪ್ರತಿಯೊಬ್ಬ ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ಸಂಪರ್ಕಿಸಿ ಹಸಿರು, ಕೆಂಪು ವಲಯಗಳಲ್ಲಿ ಯಾವ ರೀತಿ ಬಸ್‌ ಕಾರ್ಯಾಚರಣೆ ಮಾಡಬೇಕು ಎಂಬುದರ ಬಗ್ಗೆ ಸಚಿವರು ಪರಾಮರ್ಶೆ ನಡೆಸಿದರು. ಮುಂದಿನ ದಿನಗಳಲ್ಲಿ ಬಸ್ ಕಾರ್ಯಾಚರಣೆ ವ್ಯವಸ್ಥೆ ಹೇಗಿರಬೇಕು, ಸಾಮಾಜಿಕ ಅಂತರ ಕಾಪಾಡುವುದು, ಕಾರ್ಮಿಕರನ್ನು ಸ್ಥಳಾಂತರಿಸುವಾಗ ಹೆಚ್ಚಿನ ಕಾಳಜಿ ವಹಿಸುವುದು, ಬಸ್ ನಿಲ್ದಾಣಗಳನ್ನು ಸ್ಯಾನಿಟೈಸರ್​ ಮಾಡುವುದು, ಸಿಬ್ಬಂದಿ ಮಾಸ್ಕ್ ಕಡ್ಡಾಯ ಧರಿಸುವಂತೆ ತಿಳಿಸಿದರು.

ಪೊಲೀಸ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಸಾರಿಗೆ ಸಂಸ್ಥೆಗಳು ಕಾಮಿಕರ ಸ್ಥಳಾಂತರ ಪ್ರಕ್ರಿಯೆಗೆ ಚಾಲನೆ ನೀಡುವ ಬಗ್ಗೆಯೂ ಚರ್ಚಿಸಲಾಯಿತು.

ಇನ್ನು ಇದೇ ವೇಳೆ, ಸಚಿವರು ಕೋವಿಡ್-19 ಮೊಬೈಲ್ ಫೀವರ್ ಕ್ಲಿನಿಕ್ ಬಸ್​ ಅನ್ನು ಉದ್ಘಾಟಿಸಿದರು.ಬೆಂಗಳೂರು ಕೇಂದ್ರೀಯ ವಿಭಾಗದವರು ಹಳೆಯ ಬಸ್ ನಿಗಮದ ಕಾರ್ಯಾಗಾರದಲ್ಲಿಯೇ ಅಂದಾಜು ರೂ.50000/-ಗಳ ವೆಚ್ಚದಲ್ಲಿ ಅಗತ್ಯ ಸೌಲಭ್ಯಗಳನ್ನೊಳಗೊಂಡ ಮೊಬೈಲ್ ಫೀವರ್ ಕ್ಲಿನಿಕ್​ ಆಗಿ ನಿರ್ಮಿಸಲಾಗಿದೆ.

ಮೊಬೈಲ್ ಫೀವರ್ ಕ್ಲಿನಿಕ್ ಬಸ್​ ಪರಿಶೀಲನೆಮೊಬೈಲ್ ಫೀವರ್ ಕ್ಲಿನಿಕ್ ಬಸ್​ನಲ್ಲಿ ವೈದ್ಯರು, ವೈದ್ಯ ಸಿಬ್ಬಂದಿ ಹಾಗೂ ಜನರಿಗೆ ಕುಳಿತುಕೊಳ್ಳಲು ಪ್ರತ್ಯೇಕ ಆಸನಗಳ ವ್ಯವಸ್ಥೆ, ಔಷಧ ಇಡಲು ಬಾಕ್ಸ್, ಕೈ ತೊಳೆಯಲು ಸ್ಯಾನಿಟೈಸರ್ ಹಾಗೂ ಸೋಪ್​ ಆಯಿಲ್ ವ್ಯವಸ್ಥೆ ಮಾಡಲಾಗಿದೆ. ಪ್ರತ್ಯೇಕ ನೀರಿನ ವ್ಯವಸ್ಥೆ, ಫ್ಯಾನ್ ಹಾಗೂ ಇನ್ನಿತರ ಅಗತ್ಯ ಸೌಕರ್ಯಗಳನ್ನು ಸಹ ಹೊಂದಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.

ಇದೇ ವೇಳೆ, ಕಾರ್ಮಿಕ ದಿನಾಚರಣೆ ಪ್ರಯುಕ್ತ, ನಾಲ್ಕು ಸಾರಿಗೆ ನಿಗಮಗಳಲ್ಲಿ ಪ್ರತಿ ತಿಂಗಳು ಒಬ್ಬ ಚಾಲಕರಿಗೆ ಅತೀ‌ ಹೆಚ್ಚು ಇಂಧನ ಕ್ಷಮತೆ ತೋರುವವರಿಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವೈಯಕ್ತಿಕವಾಗಿ 10 ಗ್ರಾಂ ಬಂಗಾರದ ಪದಕ ನೀಡುವುದಾಗಿ ಘೋಷಣೆ ಮಾಡಿದರು.

ಸಾರಿಗೆ ಸಂಸ್ಥೆಗಳು ಇಂದು ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ನಾವೆಲ್ಲರೂ ಮುಂದಿನ ದಿನಗಳಲ್ಲಿ ತಂಡವಾಗಿ ಕರ್ತವ್ಯ ನಿರ್ವಹಿಸಿ, ಪರಿಸ್ಥಿತಿಯನ್ನು ನಿಭಾಯಿಸಲು ಸಮರ್ಥರಾಗಿರಬೇಕು ಹಾಗೂ ಆ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ತಿಳಿಸಿದರು. ಪ್ರತಿಯೊಬ್ಬ ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ಸಂಪರ್ಕಿಸಿ, ಹಸಿರು, ಕೆಂಪು ವಲಯಗಳಲ್ಲಿ ಯಾವ ರೀತಿ ಬಸ್ ಕಾರ್ಯಾಚರಣೆ ಮಾಡಬೇಕು ಎಂಬುದರ ಬಗ್ಗೆ ಪರಾಮರ್ಶೆ ನಡೆಸಿದರು.


Spread the love

About Laxminews 24x7

Check Also

ಬೈಲಹೊಂಗಲ: ಗುರು ಸಿದ್ಧಾರೂಢಮಠದ ಅದ್ಧೂರಿ ರಥೋತ್ಸವ

Spread the love ಬೈಲಹೊಂಗಲ: ಸಮೀಪದ ಹಾರೂಗೊಪ್ಪ ಗ್ರಾಮದ ಗುರು ಸಿದ್ಧಾರೂಢಮಠದ ಜಾತ್ರಾ ಮಹೋತ್ಸವದ ಮಹಾರಥೋತ್ಸವ ಭಕ್ತರ ಹರ್ಷೋದ್ಘಾರ ನಡುವೆ ಬುಧವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ